ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 31 JULY 2024 : ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆ ತುಂಗಾ ಮತ್ತು ಭದ್ರಾ ಜಲಾಶಯಗಳ ಒಳ ಹರಿವು (Inflow) ಹೆಚ್ಚಳವಾಗಿದೆ. ಆದ್ದರಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ತುಂಗಾ ಜಲಾಶಯಕ್ಕೆ 83,907 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತಿದೆ. ಇದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ.
ಇನ್ನು, ಭದ್ರಾ ಜಲಾಶಯಕ್ಕು ಒಳ ಹರಿವು ಹೆಚ್ಚಳವಾಗಿದೆ. 61,042 ಕ್ಯೂಸೆಕ್ ಒಳ ಹರಿವು ಇದೆ. 41,957 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯ 184.6 ಅಡಿಯಷ್ಟು ಭರ್ತಿಯಾಗಿದೆ.