ಭದ್ರಾವತಿಯ ನಾಲ್ವರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ, ತಲಾ ₹77,000 ದಂಡ, ಕಾರಣವೇನು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಆಸ್ತಿ ವಿಚಾರವಾಗಿ ತಿಮ್ಮಪ್ಪ ಎಂಬುವವರನ್ನು ಮನೆಯಿಂದ ಹೊರಗೆ ಎಳೆದು ಖಾರದ ಪುಡಿ ಎರಚಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದ ಆರೋಪ ಸಾಬೀತಾಗಿದೆ. ಕೃತ್ಯ ಎಸಗಿದ ನಾಲ್ವರಿಗೆ ಭದ್ರಾವತಿಯಲ್ಲಿರುವ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ (Jail) ಪ್ರಕಟಿಸಿದೆ.

ಭದ್ರಾವತಿ ತಾಲೂಕು ಆನವೇರಿಯಲ್ಲಿ ಆಸ್ತಿ ವಿಚಾರವಾಗಿ ತಿಮ್ಮಪ್ಪ ಎಂಬುವವರ ಮೇಲೆ ರಾಜಪ್ಪ, ಭರತ್‌, ರಂಗನಾಥ್‌ ಅಲಿಯಾಸ್‌ ರಂಗೇಶ್‌, ಹನುಮಂತಪ್ಪ ಎಂಬುವವರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದರು. ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭದ್ರಾವತಿಯ ಆಗಿನ ಎಎಸ್‌ಪಿ ಜಿತೇಂದ್ರ ಕುಮಾರ್‌ ದಯಾಮ ತನಿಖೆ ನಡೆಸಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

ವಿಚಾರಣೆ ನಡೆಸಿದ ನ್ಯಾ. ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ. ನಾಲ್ವರು ಆರೋಪಿಗಳಿಗೆ 2 ವರ್ಷ ಕಠಿಣ ಕಾರಗೃಹ ಶಿಕ್ಷೆ, ತಲಾ ₹77,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲರಾದರೆ ಹೆಚ್ಚುವರಿಯಾಗಿ 1 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ದಂಡದ ಮೊತ್ತದಲ್ಲಿ ₹2 ಲಕ್ಷವನ್ನು ನೊಂದವರಿಗೆ ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮ.ಪಿ ವಾದ ಮಂಡಿಸಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾಜ್ಯೋತ್ಸವ, ಧ್ವಜಾರೋಹಣದ ನಂತರ ಜಿಲ್ಲಾಧಿಕಾರಿ ಏನೆಲ್ಲ ಹೇಳಿದರು?

Jail

Leave a Comment