ಶಿವಮೊಗ್ಗ: ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ್ದಲ್ಲದೆ ಮಗುವಾದ ನಂತರವು ಆಕೆಯನ್ನು ಮನೆಗೆ ಸೇರಿಸದ ಪತಿಗೆ, ಶಿವಮೊಗ್ಗ ನ್ಯಾಯಾಲಯ ಜೈಲು (Jail) ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ 30 ದಿನ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿದ ಆದೇಶಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಏನಿದು ಪ್ರಕರಣ?
ಭದ್ರಾವತಿ ಗುಂಡೇರಿ ಕ್ಯಾಂಪ್‌ನ ಹರೀಶ್ ಅಕ್ರಮ ಸಂಬಂಧ ಹೊಂದಿದ್ದ. ಅಲ್ಲದೆ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ್ದ. ಮಗು ಆದ ಬಳಿಕ ಪತ್ನಿ ಬಂದಾಗಲು ಹರೀಶ ಮತ್ತು ಆತನ ಕುಟುಂಬದವರು ಮನೆಗೆ ಸೇರಿಸಿರಲಿಲ್ಲ ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಹರೀಶನ ಪತ್ನಿ ಶಿವಮೊಗ್ಗದ ಮಹಿಳಾ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ » ವಿಷ ಸೇವಿಸಿ ಐದು ತಿಂಗಳ ಬಾಣಂತಿ ಆತ್ಮಹತ್ಯೆ
ತನಿಖೆ ನಡೆಸಿದ ಆಗಿನ ಪಿಎಸ್‌ಐ ಶರಾವತಿ.ಎಂ ಅವರು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ನ್ಯಾ. ಸಿದ್ದರಾಜು.ಎನ್.ಕೆ ಅವರು ಹರೀಶನಿಗೆ ಶಿಕ್ಷೆ ಪ್ರಕಟಿಸಿದ್ದಾರೆ. 1 ವರ್ಷ ಜೈಲು ಶಿಕ್ಷೆ, ₹1000 ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದವರೆ 30 ದಿನ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಕಿರಣ್ ಕುಮಾರ್ ವಾದ ಮಂಡಿಸಿದ್ದರು.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





