ಭದ್ರಾವತಿಯ ಮಹಿಳೆಗೆ 10 ತಿಂಗಳು ಜೈಲು, ಕಾರಣವಾಯ್ತು ಸಾಮಾಜಿಕ ಜಾಲತಾಣದ ಪೋಸ್ಟ್‌, ಏನಿದು ಪ್ರಕರಣ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 20 MAY 2023

SHIMOGA : ಫೋಟೊಗಳ ಮೇಲೆ ಅಶ್ಲೀಲವಾಗಿ ಬರೆದು ಸಾಮಾಜಿಕ ಜಾಲತಾಣಗಳಲ್ಲಿ (Social Media) ಪೋಸ್ಟ್‌ ಮಾಡಿದ್ದ ಮಹಿಳೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

prison hand cuff image

ಭದ್ರಾವತಿಯ ಮಹಿಳೆಗೆ ಶಿಕ್ಷೆ

ಹಳೆ ದ್ವೇಷದ ಹಿನ್ನೆಲೆ ಭದ್ರಾವತಿಯ 30 ವರ್ಷದ ಮಹಿಳೆಯೊಬ್ಬಳು 6 ವರ್ಷದ ಬಾಲಕಿ, ಆಕೆಯ ಕಟುಂಬದ ಫೋಟೊಗಳ ಮೇಲೆ ಅಶ್ಲೀಲವಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್‌ ಪ್ರಕಟಿಸಿದ್ದಳು. ಈ ಸಂಬಂಧ ಬಾಲಕಿಯ ತಾಯಿ ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಆರೋಪ ಸಾಬೀತು, ಜೈಲು, ದಂಡ

ಪ್ರಕರಣದ ತನಿಖೆ ನಡೆಸಿ ಭದ್ರಾವತಿ ಸರ್ಕಲ್‌ ಇನ್ಸ್‌ಪೆಕ್ಟರ್‌ ರಾಘವೇಂದ್ರ ಕಾಂಡಿಕೆ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪ ಸಾಬೀತಾಗಿದೆ. ಈ ಹಿನ್ನೆಲೆ ಮಹಿಳೆಗೆ 10 ತಿಂಗಳು ಜೈಲು, 60 ಸಾವಿರ ರೂ. ದಂಡ ವಿಧಿಸಲಾಗಿದೆ. ಸರ್ಕಾರದ ಪರವಾಗಿ ಹರಿಪ್ರಸಾದ್‌ ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ – ಮನೆಯಲ್ಲಿ ಶೌಚಾಲಯಕ್ಕೆ ಹೋಗಿ ಹೊರ ಬಂದ ಕಾಂಗ್ರೆಸ್‌ ಹಿರಿಯ ನಾಯಕಿಗೆ ಕಾದಿತ್ತು ಶಾಕ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment