ಜಾತಿ ನಿಂದನೆ, ಮೂವರಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌, ಎಷ್ಟೆಷ್ಟು ವರ್ಷ ಕಾರಾಗೃಹ ವಾಸ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಜಾತಿ ನಿಂದನೆ (Atrocity) ಮಾಡಿದ ಮೂವರಿಗೆ ನಗರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜೈಲು ಶಿಕ್ಷೆ ವಿಧಿಸಿದೆ.

ಏನಿದು ಪ್ರಕರಣ?

ಭದ್ರಾವತಿ ತಾಲೂಕಿನ ಸಿರಿಯೂರು ವೀರಾಪುರ ಗ್ರಾಮದ ವಾಸಿಗಳಾದ ಮನು, ಶ್ರೀಧರ, ಮೋಹನ, ಹರೀಶ ಅವರು 2018ರ ಆಗಸ್ಟ್ 11ರಂದು ಅದೇ ಗ್ರಾಮದ ನಾಗರತ್ನ ಬಾಯಿ ಅವರ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿ, ಹಲ್ಲೆ ಮಾಡಿದ್ದರು. ಅಲ್ಲದೆ ಮನೆ ಹಾಗೂ ಅಂಗಡಿ ಸಾಮಾನುಗಳನ್ನು ಹಾಳು ಮಾಡಿದ್ದರ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ » ಭದ್ರಾವತಿಯಲ್ಲಿ ಶಿಕ್ಷಕಿ ಸೇರಿ ಇಬ್ಬರಿಗೆ ಮರಣದಂಡನೆ, ಏನಿದು ಪ್ರಕರಣ?

ಪೊಲೀಸರು ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಹಂತದಲ್ಲಿರುವಾಗ 1ನೇ ಆರೋಪಿ ಮನು ಮೃತಪಟ್ಟಿದ್ದನು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀಧರ ಮತ್ತು ಮೋಹನಗೆ 4 ವರ್ಷ ಸೆರೆವಾಸ, ಹರೀಶನಿಗೆ 2 ವರ್ಷ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ.

4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್‌ ಅವರು ಆದೇಶ ಹೊರಡಿಸಿದ್ದಾರೆ. ತನಿಖಾಧಿಕಾರಿ ಡಿವೈಎಸ್‌ಪಿ ಓಂಕಾರ ನಾಯ್ಕ, ಸಹಾಯಕರಾಗಿ ಎಎಸ್‌ಐ ಜಯಪ್ಪ ಆರೋಪ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಪಿ.ರತ್ನಮ್ಮ ವಾದ ಮಂಡಿಸಿದ್ದರು.

Atrocity case Jail for three members

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment