ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020
ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ರಾತ್ರಿ ವೇಳೆ ಜಲಾಶಯದಿಂದ ಮತ್ತಷ್ಟು ನೀರು ಹೊರ ಹರಿಸುವ ಸಾದ್ಯತೆ ಇದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನದಿ ಪಾತ್ರದ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ.
ಕಾಳಜಿ ಕೇಂದ್ರ ಆರಂಭ
ಭದ್ರಾವತಿಯಲ್ಲಿ ಮೊದಲ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಇಲ್ಲಿನ ಒಕ್ಕಲಿಗರ ಭವನದಲ್ಲಿ ಕಾಳಜಿ ಕೇಂದ್ರ ಶುರು ಮಾಡಲಾಗಿದೆ. ಸುಮಾರು 30 ಮಂದಿಯನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದ್ದು, ಅವರಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆ.
ತಹಶೀಲ್ದಾರ್ ಭೇಟಿ, ಪರಿಶೀಲನೆ
ಕಾಳಜಿ ಕೇಂದ್ರಕ್ಕೆ ತಹಶೀಲ್ದಾರ್ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಊಟ, ವಸತಿ, ಸುರಕ್ಷತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ತಾಲೂಕು ಆಡಳಿತ ಮತ್ತು ನಗರಸಭೆಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]