ಭದ್ರಾವತಿ: ನಗರದ ಭೂತನಗುಡಿಯ ಭೂತಪ್ಪ ಶನೈಶ್ಚರ ದೇವಾಲಯದಲ್ಲಿ ಶನಿವಾರ ರಾತ್ರಿ ಹುಂಡಿ ಹಣ ಕಳವು ಮಾಡಲಾಗಿದೆ. ದೇವಾಲಯದ ಗ್ರಿಲ್ ಕಟ್ ಮಾಡಿ ಒಳನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಕಾಣಿಕೆ (Kanike) ಹಣ ಕದ್ದೊಯ್ದಿದ್ದಾರೆ.
ಹುಂಡಿಯಲ್ಲಿ ಕಳೆದ 3 ವರ್ಷಗಳ ಹಣವಿತ್ತು ಎನ್ನಲಾಗಿದೆ. ಭಾನುವಾರ ಬೆಳಗ್ಗೆ ದೇವಾಲಯಕ್ಕೆ ಬಂದು ಬಾಗಿಲು ತೆಗೆದ ಅರ್ಚರಿಗೆ ಹುಂಡಿ ಬೀಗ ಒಡೆದಿರುವುದು ಕಂಡುಬಂದಿದೆ. ನಂತರ ಗೋಡೆಯ ಗ್ರಿಲ್ ಸಹ ಕಟ್ ಆಗಿರುವುದನ್ನು ಗಮನಿಸಿದ ಅರ್ಚಕರು ದೇವಸ್ಥಾನದ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು.
ಹಳೇನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಶ್ವಾನದಳ ಕರೆಸಿ ಶೋಧಕಾರ್ಯ ನಡೆಸಿದರು.
ಇದನ್ನೂ ಓದಿ » ಸಾಲದ ಕಂತು ಕಟ್ಟದ ಗ್ರಾಹಕನನ್ನು ಸಂಪರ್ಕಿಸಿದ ಬಜಾಜ್ ಫೈನಾನ್ಸ್ ಸಿಬ್ಬಂದಿಗೆ ಕಾದಿತ್ತು ಶಾಕ್, ದಾಖಲಾಯ್ತು ಕೇಸ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200