ಕೇರಳದಿಂದ ತರಕಾರಿ ಲಾರಿಯಲ್ಲಿ ಭದ್ರಾವತಿಗೆ ಬಂದವನು ಮೆಗ್ಗಾನ್ ಆಸ್ಪತ್ರೆ ಕ್ವಾರಂಟೈನ್‌ಗೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 13 ಏಪ್ರಿಲ್ 2020

ಕೇರಳದಿಂದ ತರಕಾರಿ ಲಾರಿಯಲ್ಲಿ ಭದ್ರಾವತಿಗೆ ಬಂದು ಪರಿಚಯದವರ ಮನೆಯಲ್ಲಿದ್ದ ವ್ಯಕ್ತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, 28 ದಿನ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ.

ಕೇರಳದ ಕಾಸರಗೋಡು ಜಿಲ್ಲೆಯಿಂದ ತಬ್ಬೀರ್ ಸಾಬ್ (55) ಎಂಬಾತ ಭದ್ರಾವತಿಗೆ ಆಗಮಿಸಿದ್ದಾನೆ. ಈತ ಏಪ್ರಿಲ್ 10ರಂದು ದೊಣಬಘಟ್ಟದ  ಪರಿಚಯದವರ ಮನೆಗೆ ಬಂದಿದ್ದ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೆ ಆರೋಗ್ಯ ಇಲಾಖೆ ಅಧಿಕಾರಿಗಳು ತಬ್ಬೀರ್ ಸಾಬ್‍ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.

28 ದಿನ ಕ್ವಾರಂಟೈನ್

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕರೋನ ಶಂಕಿತ ಕೇಸ್‍ಗಳು ಹೆಚ್ಚಿವೆ. ಈ ಹಿನ್ನೆಯಲ್ಲಿ ತಬ್ಬೀರ್‍ಸಾಬ್‍ನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಜ್ವರದ ಲಕ್ಷಗಳಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ 28 ದಿನ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment