ಭದ್ರಾವತಿ: ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಗೆ ಸಿದ್ದಾಪುರ– ಮಿಲ್ಟ್ರಿಕ್ಯಾಂಪ್–ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ ಬಸ್‌ಗಳ (KSRTC) ಸಂಚಾರ ಆರಂಭಿಸಿದೆ. ಪ್ರಯಾಣಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ನಗರದ ಕಡದಕಟ್ಟೆಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಕಾರಣ ಮೂರು ವರ್ಷಗಳಿಂದ ಸಿದ್ದಾಪುರದ ಮಾರ್ಗವಾಗಿ ಬಸ್‌ಗಳು ನಗರವನ್ನು ಪ್ರವೇಶಿಸುತ್ತಿದ್ದವು. ಇದರಿಂದ ಹುಡ್ಕೋ, ಕಾಗದ ನಗರ, ಮಿಲ್ಟ್ರಿಕ್ಯಾಂಪ್, ಬುಳ್ಳಾಪುರ, ನ್ಯೂಟೌನ್ ಸೇರಿ ಸುತ್ತಮುತ್ತಲಿನ ಪ್ರದೇಶಗಳಿಂದ ಸಂಚಾರ ಮಾಡುತ್ತಿದ್ದ ನೂರಾರು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲವಾಗಿತ್ತು.
ಈಗ ಕಡದಕಟ್ಟೆ ರೈಲ್ವೆ ಮೇಲ್ಸೇತುವೆ ಉದ್ಘಾಟನೆಗೊಂಡ ಕಾರಣ ಎಲ್ಲ ಸಾರಿಗೆ ಸಂಸ್ಥೆ ಬಸ್‌ಗಳು ಮತ್ತು ನಗರ ಸಂಚಾರ ಬಸ್‌ಗಳು ಈ ಮಾರ್ಗವಾಗಿಯೇ ಉಭಯ ನಗರಗಳನ್ನು ಪ್ರವೇಶಿಸುತ್ತಿವೆ.
ಇದರಿಂದ ಸಿದ್ದಾಪುರ ಮಾರ್ಗವಾಗಿ ಸಂಚರಿಸುತ್ತಿದ್ದವರಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಈ ಮಾರ್ಗವಾಗಿ ನಾಲ್ಕು ಬಸ್‌ಗಳ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ. ಮಂಗಳವಾರದಿಂದ ಈ ಬಸ್‌ಗಳು ಕಾರ್ಯಾರಂಭ ಮಾಡಲಿವೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್, ವಾಪಸ್ ಬಂದಾಗ ಕಾದಿತ್ತು ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200