ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
BHADRAVATHI : ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ಮರುದಿನವೆ ಹೆಚ್.ಡಿ.ಕುಮಾರಸ್ವಾಮಿ ಅವರು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಪುನಶ್ಚೇತನ ಕುರಿತು ಅಧಿಕಾರಿಗಳ ಸಭೆ ನಡೆಸಿದ್ದಾರೆ. ಹಾಗಾಗಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಕಾರ್ಖಾನೆಗೆ ಅಗತ್ಯ ಬಂಡವಾಳ ಹೂಡಿಕೆ ಮಾಡುವ ವಿಶ್ವಾಸವಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ತಿಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರ ವಹಿಸಿಕೊಂಡ ಮರುದಿನವೆ ವಿಐಎಸ್‌ಎಲ್ ಕುರಿತು ಅಧಿಕಾರಿಗಳ ಸಭೆ ನಡೆಸಿರುವುದು ಅವರ ಕಾರ್ಯದಕ್ಷತೆಗೆ ಸಾಕ್ಷಿ. ಕಾರ್ಖಾನೆ ಬಂಡವಾಳ ಹಿಂತೆಗೆತ ನಿರ್ಧಾರ ವಿರೋಧಿಸಿ ಕಾರ್ಮಿಕರು ನಡೆಸುತ್ತಿರುವ ಹೋರಾಟ 500 ದಿನಗಳನ್ನು ಪೂರೈಸಿದೆ. ಈ ಹೋರಾಟದ ಸ್ಥಳಕ್ಕೆ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದರು. ಆಗ ಕಾರ್ಖಾನೆ ಉಳಿಸುವ ಭರವಸೆ ನೀಡಿದ್ದರು. ಈಗ ಅವರು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿರುವುದು ಸಂತಸ ಮೂಡಿಸಿದೆ ಎಂದರು.
ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್, ತಾಲೂಕು ಅಧ್ಯಕ್ಷ ಆರ್.ಕರುಣಾಮೂರ್ತಿ, ಪ್ರಮುಖರಾದ ನರಸಿಂಹಾಚಾರ್, ತಿಮ್ಮೇಗೌಡ, ರಾಮಕೃಷ್ಣ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ಮರದ ಕೆಳಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ