EDUCATION NEWS, 20 NOVEMBER 2024 : ಅಧ್ಯಾಪಕೇತರ ನೌಕರರ ಬಡ್ತಿ ಮತ್ತು ಸೇವಾ ಸೌಲಭ್ಯಕ್ಕೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯ (University) ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಶಂಕರಘಟ್ಟದಲ್ಲಿ ವಿವಿ ಅಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಬಡ್ತಿ ಮತ್ತು ಸೇವಾ ಸೌಲಭ್ಯ ಒದಗಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಅಧ್ಯಾಪಕೇತರ ನೌಕರರು ಭರವಸೆಗಳನ್ನು ಮಾತ್ರ ನೀಡಲಾಗುತ್ತಿದೆ. ಈಚೆಗೆ ಕುವೆಂಪು ವಿವಿ ಕುಲಪತಿ ಅವರನ್ನು ಭೇಟಿಯಾಗಿ ಸರ್ಕಾರದ ನಿಯಮ ಮತ್ತು ಆದೇಶಗಳನ್ನು ತೋರಿಸಲಾಗಿತ್ತು. ಆದರೆ ಇದಕ್ಕೆ ಕುಲಪತಿ ಅವರು ಬೇಡಿಕೆ ಈಡೇರಿಸುವ ಕುರಿತು ಸ್ಪಷ್ಟ ಭರವಸೆ ನೀಡಿಲ್ಲ. ಹಾಗಾಗಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಮೂರು ರೈಲುಗಳ ಸಂಚಾರ ರದ್ದು, ಕೆಲವು ರೈಲುಗಳ ಸಮಯದಲ್ಲಿ ಬದಲಾವಣೆ
ಕರ್ತವ್ಯಕ್ಕೆ ರಜೆ ಹಾಕಿದ ಅಧ್ಯಾಪಕೇತರ ಸಿಬ್ಬಂದಿ ಕುವೆಂಪು ವಿವಿ ಆಡಳಿತ ಕಚೇರಿ ಮುಂಭಾಗ ಪ್ರತಿಭಟಿಸಿದರು. ಸಂಘದ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮಹೇಶ್, ಕಾರ್ಯದರ್ಶಿ ಅಬ್ದುಲ್ ಆಲಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





