ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
HOLEHONNURU : ಕೊಪ್ಪ ದೊಡ್ಡಕೆರೆ ಜಾಗವನ್ನು ಕೆರೆಬೀರನಹಳ್ಳಿ ಗ್ರಾಮ ಸಮೀಪ ಅಕ್ರಮವಾಗಿ ಒತ್ತುವರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಅಚ್ಚುಕಟ್ಟು ಪ್ರದೇಶದ ರೈತರು ತಡೆದು ಪೊಲೀಸರಿಗೆ ದೂರು ನೀಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹಿಟಾಚಿ, ಜೆಸಿಬಿ ಯಂತ್ರಗಳನ್ನು ಬಳಸಿ ಕೆರೆ ಒತ್ತುವರಿ ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಅಚ್ಚುಕಟ್ಟು ಭಾಗದ ರೈತರು ಸ್ಥಳಕ್ಕೆ ತೆರಳಿ ಒತ್ತುವರಿ ಕಾರ್ಯವನ್ನು ತಡೆದಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಹಿಟಾಚಿ, ಜೆಸಿಬಿ, ಟ್ರ್ಯಾಕ್ಟರ್ಗಳನ್ನು ವಶಕ್ಕೆ ಪಡೆದುಕೊಂಡರು.
ಒಟ್ಟು 220.19 ಎಕರೆ ವಿಸ್ತಾರದಲ್ಲಿ ಕೊಪ್ಪ ದೊಡ್ಡಕೆರೆ ಇದೆ. ಈ ಕೆರೆ ನೀರು ಸಾವಿರಾರು ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಕಡಿಮೆ ಮಳೆ, ಭದ್ರಾ ಜಲಾಶಯದ ನಾಲೆಯಿಂದ ನೀರು ಹರಿಸದ ಕಾರಣ ಕೆರೆಯಲ್ಲಿ ನೀರನ ಮಟ್ಟ ಇಳಿಕೆಯಾಗಿದೆ. ಇದೆ ಸಮಯದಲ್ಲಿ ಕೆರೆಯನ್ನು ಒತ್ತುವರಿ ಮಾಡಲಾಗುತ್ತಿತ್ತು. ಈ ಹಿನ್ನೆಲೆ ಅಚ್ಚುಕಟ್ಟು ಭಾಗದ ರೈತರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ – ಕೆರೆಯಲ್ಲಿ ರಾಶಿ ರಾಶಿ ಮೀನು ಮರಿಗಳು ಸಾವು