SHIVAMOGGA LIVE NEWS | 29 JUNE 2024
BHADRAVATHI : ಹಾವೇರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರಾದ 9 ಮಂದಿಯ ಅಂತ್ಯ ಸಂಸ್ಕಾರವು (Last Rites) ಭದ್ರಾವತಿ ತಾಲೂಕು ಎಮ್ಮಹೆಟ್ಟಿ ಗ್ರಾಮದಲ್ಲಿ ನಡೆಯಿತು. ಮರಾಠ ಸಂಪ್ರದಾಯದಂತೆ ಶುಕ್ರವಾರ ಸಂಜೆ ಹಿಂದೂ ರುದ್ರಭೂಮಿಯಲ್ಲಿ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದಕ್ಕೂ ಮೊದಲು ಎಮ್ಮೆಹಟ್ಟಿಯ ಸರ್ಕಾರಿ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸುತ್ತಮುತ್ತಲ ಗ್ರಾಮ ಸೇರಿದಂತೆ ವಿವಿಧೆಡೆಯಿಂದ ಸಂಬಂಧಿಕರು, ಪರಿಚಿತರು ಸೇರಿದಂತೆ ದೊಡ್ಡ ಸಂಖ್ಯೆಯ ಜನರು ಸೇರಿದ್ದರು. ಜನರ ನಿಯಂತ್ರಣಕ್ಕೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಶಾಸಕಿ ಶಾರದಾ ಪೂರ್ಯಾ ನಾಯ್ಕ, ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಕೆ.ಬಿ. ಅಶೋಕನಾಯ್ಕ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಅಂತಿಮ ದರ್ಶನ ಪಡೆದರು.
ಒಂದೇ ಚಿತೆಯಲ್ಲಿ ಅಂತ್ಯ ಸಂಸ್ಕಾರ
ಗ್ರಾಮದ ರುದ್ರಭೂಮಿಯಲ್ಲಿ ಮರಾಠ ಸಂಪ್ರದಾಯದಂತೆ 9 ಜನರನ್ನು ಒಂದೇ ಚಿತೆಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ವಿಶಾಲಾಕ್ಷಮ್ಮ, ಆದರ್ಶ, ಭಾಗ್ಯಮ್ಮ, ಮಾನಸಾಳ ಮೃತ ದೇಹಗಳಿಗೆ ಸಹೋದರನ ಮಗ ಅಗ್ನಿ ಸ್ಪರ್ಶ ಮಾಡಿದರು.
ಇದನ್ನೂ ಓದಿ – ತರಲಘಟ್ಟ ಬಳಿ ಭೀಕರ ಅಪಘಾತ, ಬೈಕ್‌ಗೆ ಆಂಬುಲೆನ್ಸ್ ಡಿಕ್ಕಿ, ಮೂವರು ಸಾವು