ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಳೆಹೊನ್ನೂರು: ಅಡಿಕೆ ತೋಟದಲ್ಲಿ ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರ (lecturer) ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಘಟನೆ ನಡೆದಿದೆ. ಮೃತರನ್ನು ಉಪನ್ಯಾಸಕ ಸುರೇಶ್ (58) ಎಂದು ಗುರುತಿಸಲಾಗಿದೆ.

ತೋಟದಲ್ಲಿ ಸುರೇಶ್ ಅವರ ಮೃತದೇಹವು ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಗಮನಿಸಿದಾಗ ಮೃತದೇಹವು ಬಳಿ ಇನ್ನು ಬೆಂಕಿ ಇತ್ತು. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.
LATEST NEWS
- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

- ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು














