ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

Published On : ಮಾರ್ಚ್ 29, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹೊಳೆಹೊನ್ನೂರು: ಅಡಿಕೆ ತೋಟದಲ್ಲಿ ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರ (lecturer) ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಘಟನೆ ನಡೆದಿದೆ. ಮೃತರನ್ನು ಉಪನ್ಯಾಸಕ ಸುರೇಶ್‌ (58) ಎಂದು ಗುರುತಿಸಲಾಗಿದೆ.

Lecturer-body-at-Hanumanthapura-areca-farm

ತೋಟದಲ್ಲಿ ಸುರೇಶ್‌ ಅವರ ಮೃತದೇಹವು ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಗಮನಿಸಿದಾಗ ಮೃತದೇಹವು ಬಳಿ ಇನ್ನು ಬೆಂಕಿ ಇತ್ತು. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 29, 2026

Leave a Comment