ವಿಐಎಸ್‌ಎಲ್‌, ಭದ್ರಾವತಿಯಲ್ಲಿ ಬಿ.ವಿ.ಶ್ರೀನಿವಾಸ್‌ಗೆ ಮನವಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 4 DECEMBER 2024

ಭದ್ರಾವತಿ : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಪುನಶ್ಚೇತನಗೊಳಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ಕಲ್ಪಿಸಿ ಅವರ ಹಿತರಕ್ಷಣೆ ಮಾಡುವಂತೆ ಯುವ ಕಾಂಗ್ರೆಸ್‌ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರಿಗೆ ಸುರಗಿತೋಪು ನಿವಾಸಿಗಳು ಮನವಿ ಮಾಡಿದರು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಸುರಗಿತೋಪು ಚೌಡೇಶ್ವರಿ ದೇವಸ್ಥಾನಕ್ಕೆ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಭೇಟಿ ನೀಡಿ ಚೌಡೇಶ್ವರಿ ದೇವಿಯ ದರ್ಶನ ಪಡೆದರು. ಈ ಸಂದರ್ಭ ಅವರನ್ನು ಭೇಟಿಯಾದ ಸ್ಥಳೀಯರು ವಿಐಎಸ್‌ಎಲ್‌ ಕುರಿತು ಮನವಿ ಮಾಡಿದರು.

BV-Srinivas-at-Bhadravathi-temple. VISL

ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿ.ವಿ.ಶ್ರೀನಿವಾಸ್‌, ಶೀಘ್ರದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ » ‘ನಾನೇನು ಸನ್ಯಾಸಿಯಲ್ಲ, ಮೂರು ಬಾರಿ ಶಾಸಕನಾಗಿದ್ದೇನೆʼ

ದೇವಸ್ಥಾನದ ಪ್ರಧಾನ ಅರ್ಚಕ ಮುರಳೀಧರ, ಮುಖಂಡರಾದ ರಾಮಕೃಷ್ಣ, ಕಾಶಿ, ಉಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Comment