ಹೊಳೆಹೊನ್ನೂರು: ಮೈದೊಳಲಿನಲ್ಲಿ ಶನಿವಾರ ಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ (Rathotsava) ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಮಂಗಳವಾರ ಕೊಡಿ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಬಳಿ ಕೆಂಡಾರ್ಚನೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಗುರುವಾರ ಉಚ್ಚಯ್ಯ ಉತ್ಸವ, ಶುಕ್ರವಾರ ಮುಂಜಾನೆ ನಡೆದ ರಥೋತ್ಸವದಲ್ಲಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ರಥ ಎಳೆದು ಭಕ್ತಿ ಸಮರ್ಪಿಸಿದರು. ಇಷ್ಟಾರ್ಥ ಸಿದ್ಧಿಗಾಗಿ ಕೆಲವರು ರಥದ ಕಳಸಕ್ಕೆ ಬಾಳೆಹಣ್ಣು ಎಸೆದರು.
ಹರಕೆ ಹೊತ್ತವರು ಮಕ್ಕಳ ಜವಳ ತೆಗೆಸಿ ಭಕ್ತಿ ಸಮರ್ಪಿಸಿ, ಹರಕೆ ಕಾಣಿಕೆಗಳನ್ನು ತೀರಿಸಿದರು. ಡೊಳ್ಳು, ತಮಟೆ, ವೀರಗಾಸೆ ನೃತ್ಯ ಮೇಳಗಳು ರಾಜಬೀದಿ ಉತ್ಸವಕ್ಕೆ ಮೆರುಗು ನೀಡಿದವು. ಗ್ರಾಮಸ್ಥರು ಭಕ್ತರಿಗೆ ಕೋಸಂಬರಿ, ಪಾನಕ ಹಂಚಿದರು. ಶನಿವಾರ ಸಂಜೆ ಗ್ರಾಮದ ಗಡಿಗೆ ಚರಗ ಚೆಲ್ಲುವುದರೊಂದಿಗೆ ರಥೋತ್ಸವ ಮುಕ್ತಾಯವಾಯಿತು. ಆಂಜನೇಯ ಸ್ವಾಮಿ ಸೇವಾ ಸಮಿತಿ ಜಾತ್ರಾ ಮಹೋತ್ಸವನ್ನು ನಿರ್ವಹಿಸಿತು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ