ಕುಡುಗೋಲಿನಿಂದ ಹಲ್ಲೆ; ಅಣ್ಣನಿಂದಲೆ ತಮ್ಮನ ಕೊಲೆ, ಯಾಕೆ? ಎಲ್ಲಿ ಆಗಿದ್ದು?

ಭದ್ರಾವತಿ: ತಾಲೂಕಿನ ದಾಸರಕಲ್ಲಹಳ್ಳಿ (Dasara Kallahalli) ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ (Murder) ಅಂತ್ಯವಾಗಿದೆ. ಅಣ್ಣನೇ ತನ್ನ ಸ್ವಂತ ತಮ್ಮನ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ.

​ಸಂತೋಷ್ (40) ಕೊಲೆಯಾದ ವ್ಯಕ್ತಿ. ಆರೋಪಿ ರಾಮಪ್ಪ (40) ಎಂಬುವವರು ತಮ್ಮ ತಮ್ಮನ ಮೇಲೆ ಕುಡುಗೋಲಿನಿಂದ (Sickle) ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಮನೆ ಬಳಿ ಇಬ್ಬರ ನಡುವೆ ಸಣ್ಣ ವಿಷಯಕ್ಕೆ ಗಲಾಟೆ (Quarrel) ಆರಂಭವಾಗಿತ್ತು. ಮಾತಿಗೆ ಮಾತು ಬೆಳೆದು ಪರಸ್ಪರ ಬೈದಾಡಿಕೊಂಡಿದ್ದಾರೆ. ಈ ವೇಳೆ ಸಿಟ್ಟಿಗೆದ್ದ ರಾಮಪ್ಪ, ತಮ್ಮ ಸಂತೋಷ್ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ​

Shivamogga-Police-Jeep

ತೀವ್ರವಾಗಿ ಗಾಯಗೊಂಡಿದ್ದ ಸಂತೋಷ್ ಅವರನ್ನು ಕುಟುಂಬಸ್ಥರು ತಕ್ಷಣವೇ ಹೊಳೆಹೊನ್ನೂರು (Holehonnuru) ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ (Medical Treatment) ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ (McGann Hospital) ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸಂತೋಷ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ (Mortuary) ರವಾನಿಸಲಾಗಿದೆ. ಆರೋಪಿ ರಾಮಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 13, 2026 at 4:38 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 13, 2026