SHIVAMOGGA LIVE NEWS | 17 ಮಾರ್ಚ್ 2022
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ವೀರಶೈವ-ಲಿಂಗಾಯಿತ ಸಮುದಾಯದ ಮುಖಂಡರು ಮನವಿ ಸಲ್ಲಿಸಿದ್ದಾರೆ.
ಭದ್ರಾವತಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತ ನೀಡಿದ್ದಾರೆ. ಅಭಿವೃದ್ಧಿಯ ಹರಿಕಾರರಾಗಿ ಸಾಮಾಜಿಕ ನ್ಯಾಯ ನೀಡಿದ್ದಾರೆ. ಅವರ ಶ್ರಮದ ಫಲವಾಗಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಅವರ ಕೀರ್ತಿ ನಾಡಿನೆಲ್ಲೆಡೆ ಶಾಶ್ವತವಾಗಿರಲು ವಿಮಾನ ನಿಲ್ದಾಣಕ್ಕೆ ಅವರ ಹೆಸರು ನಾಮಕರಣ ಮಾಡುವುದೇ ಸಮಂಜಸವಾಗಿದೆ ಎಂದು ತಿಳಿಸಿದರು.
ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ವೀರಶೈವ ಸಮುದಾಯಗಳ ಮುಖಂಡರಾದ ನಗರಸಭ ಅಧ್ಯಕ್ಷೆ ಗೀತಾ ರಾಜಕುಮಾರ್, ಬಿ.ಕೆ.ಮೋಹನ್, ನಂದಿನಿ ಮಲ್ಲಿಕಾರ್ಜುನ, ಆರ್.ಮಹೇಶ್ ಕುಮಾರ್, ಮಹೇಶ್ ಕುಮಾರ್, ವಾಗೀಶ್, ರವಿ, ಮಂಜು, ಆರ್.ಎಸ್.ಶೋಭಾ ಮುಂತಾದವರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಇದನ್ನೂ ಓದಿ | ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ಕುರಿತು ಜಿಲ್ಲೆಯ ಜನ ಪ್ರತಿನಿಧಿಗಳಿಂದ ಸಿಎಂಗೆ ಮನವಿ
ಇದನ್ನೂ ಓದಿ | ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರನ್ನೇಕೆ ಇಡಬಾರದು?’
ಈ ಮೇಲ್ – [email protected]
WhatsApp Number – 7411700200