SHIVAMOGGA LIVE NEWS | 12 FEBRUARY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
BHADRAVATHI : ವಿಐಎಸ್‌ಎಲ್ ಕಾರ್ಖಾನೆ ಮುಚ್ಚಲು ಆದೇಶಿಸಿರುವ ಉಕ್ಕು ಪ್ರಾಧಿಕಾರ ತನ್ನ ನಿಲುವು ಬದಲಿಸಬೇಕು. ಕಾರ್ಖಾನೆಯನ್ನು ಉಳಿಸಬೇಕು ಎಂದು ವಿಐಎಸ್‌ಎಲ್ ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರವು ದಿಲ್ಲಿಗೆ ನಿಯೋಗ ತೆರಳಿ ಉಕ್ಕು ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದೆ.
ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೇಂದು ಪ್ರಕಾಶ್ ಅವರನ್ನು ಭೇಟಿಯಾದ ನಿಯೋಗ ಮನವಿ ಸಲ್ಲಿಸಿದೆ.
ನಿಯೋಗದ ಮನವಿ ಏನು?
ಬೇಡಿಕೆ 1
ಈ ಹಿಂದೆ ಕಾರ್ಖಾನೆಗೆ ಆಗಮಿಸಿ ವೀಕ್ಷಿಸಿದ್ದ ಕೇಂದ್ರ ಉಕ್ಕು ಸಚಿವರು ಅಗತ್ಯ ಬಂಡವಾಳ ತೊಡಗಿಸಿ ಕಾರ್ಖಾನೆ ಅಭಿವೃದ್ಧಿ ಹಾಗೂ ಪುನಶ್ಚೇತನದ ಭರವಸೆ ನೀಡಿದ್ದರು. ಅಂತೆಯೆ ಬಂಡವಾಳ ಹೂಡಿಕೆ ಮಾಡಬೇಕು.
ಬೇಡಿಕೆ 2
ಕಾರ್ಖಾನೆಯ ವಸತಿ ಗೃಹಗಳನ್ನು ಪುನಃ ದೀರ್ಘಾವಧಿ ಬಾಡಿಗೆ ಆಧಾರದಡಿ ವಿತರಣೆ ಮಾಡಬೇಕು. 1998ರ ನಡುವೆ ನಿವೃತ್ತಿ ಹೊಂದಿರುವ ಕಾರ್ಮಿಕರಿಗೆ ವೈದ್ಯಕೀಯ ಭತ್ಯೆ ಯೋಜನೆ ಜಾರಿ ಮಾಡಬೇಕು.
ವಿಐಎಸ್‌ಎಲ್ ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ.ರಾಮಲಿಂಗಯ್ಯ, ಉಪಾಧ್ಯಕ್ಷ ಎಸ್.ಅಡವೀಶಯ್ಯ, ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ಹಲವರು ನಿಯೋಗದಲ್ಲಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಡಿಕೆ ತೋಟಕ್ಕೆ ಬೆಂಕಿ, ಗಿಡಗಳು ಭಸ್ಮ | ರಾತ್ರೋರಾತ್ರಿ ರಾಯಲ್ ಎನ್‌ಫೀಲ್ಡ್ ಬೈಕ್ ನಾಪತ್ತೆ – ಫಟಾಫಟ್ ನ್ಯೂಸ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






