ಭದ್ರಾವತಿಯ ವಿಐಎಸ್ಎಲ್’ಗೆ ಮರುಜೀವ, ಕೊನೆಗೂ ಮಂಜೂರಾಯ್ತು 150 ಎಕರೆಯ ಗಣಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019

ಮುಚ್ಚುವ ಹಂತ ತಲುಪಿದ್ದ ವಿಐಎಸ್ಎಲ್ ಕಾರ್ಖಾನೆಗೆ ಮರುಜೀವ ಸಿಕ್ಕಂತಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 150 ಎಕರೆ ಗಣಿ ಮಂಜೂರಾಗಿದೆ. ಈ ಸಂಬಂಧ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.

52541575 1987123988052915 6354273551721168896 n.jpg? nc cat=103& nc oc=AQlpUzHovm605G9WXQCSF 755wkvDhkch 2Wd7oucf6pYQRo9qZYzkVW kX78kLl5Hg& nc ht=scontent.fmaa1 2

ಸಂಡೂರಿನ ರಮಣದುರ್ಗದ ಬ್ಲಾಕ್ ನಂಬರ್ 13/1ರಲ್ಲಿ 150 ಎಕರೆ ಭೂಮಿಯನ್ನು ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ 10 ವರ್ಷಗಳವರೆಗೆ  ಮಂಜೂರು ಮಾಡಲಾಗಿದೆ. ಹತ್ತು ವರ್ಷದ ಬಳಿಕ ನವೀಕರಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವಿಐಎಸ್ಎಲ್ ಕಾರ್ಮಿಕರು ನಿಟ್ಟುಸಿರು ಬಿಡುವಂತಾಗಿದೆ.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ 2017ರಲ್ಲಿ ರಮಣದುರ್ಗದಲ್ಲಿ ಜಾಗ ಗುರುತಿಸಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಯನ್ನು ಪರಿಗಣಿಸಿದ ಕೇಂದ್ರ ಸರ್ಕಾರ ಗಣಿ ಮಂಜೂರು ಮಾಡಿದೆ. ಇತ್ತೀಚೆಗೆ ದೆಹಲಿಗೆ ತೆರಳಿದ್ದ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ಸಚಿವರನ್ನು ಭೇಟಿಯಾಗಿ ಗಣಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment