ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019
ಮುಚ್ಚುವ ಹಂತ ತಲುಪಿದ್ದ ವಿಐಎಸ್ಎಲ್ ಕಾರ್ಖಾನೆಗೆ ಮರುಜೀವ ಸಿಕ್ಕಂತಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 150 ಎಕರೆ ಗಣಿ ಮಂಜೂರಾಗಿದೆ. ಈ ಸಂಬಂಧ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಂಡೂರಿನ ರಮಣದುರ್ಗದ ಬ್ಲಾಕ್ ನಂಬರ್ 13/1ರಲ್ಲಿ 150 ಎಕರೆ ಭೂಮಿಯನ್ನು ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ 10 ವರ್ಷಗಳವರೆಗೆ ಮಂಜೂರು ಮಾಡಲಾಗಿದೆ. ಹತ್ತು ವರ್ಷದ ಬಳಿಕ ನವೀಕರಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವಿಐಎಸ್ಎಲ್ ಕಾರ್ಮಿಕರು ನಿಟ್ಟುಸಿರು ಬಿಡುವಂತಾಗಿದೆ.
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ 2017ರಲ್ಲಿ ರಮಣದುರ್ಗದಲ್ಲಿ ಜಾಗ ಗುರುತಿಸಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಯನ್ನು ಪರಿಗಣಿಸಿದ ಕೇಂದ್ರ ಸರ್ಕಾರ ಗಣಿ ಮಂಜೂರು ಮಾಡಿದೆ. ಇತ್ತೀಚೆಗೆ ದೆಹಲಿಗೆ ತೆರಳಿದ್ದ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ಸಚಿವರನ್ನು ಭೇಟಿಯಾಗಿ ಗಣಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]