ಶಿವಮೊಗ್ಗ LIVE
ಭದ್ರಾವತಿ: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಇಂದು ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL) ಭೇಟಿ ನೀಡಿದ್ದರು. ಕಾರ್ಖಾನೆ ಪುನಶ್ಚೇತನ ಕುರಿತು ಮಹತ್ವದ ಸಭೆ ನಡೆಸಿದರು.
ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shimoga Airport) ಆಗಮಿಸಿದರು. ಸಂಸದ ಬಿ.ವೈ.ರಾಘವೇಂದ್ರ (BY Raghavendra) ಕೇಂದ್ರ ಸಚಿವರನ್ನು ಸ್ವಾಗತಿಸಿದರು. ಈ ಸಂದರ್ಭ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ್, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಭದ್ರಾವತಿ ಜೆಡಿಎಸ್ ನಾಯಕಿ ಶಾರದಾ ಅಪ್ಪಾಜಿ ಸೇರಿದಂತೆ ಹಲವರು ಇದ್ದರು.

ವಿಐಎಸ್‌ಎಲ್‌ನಲ್ಲಿ ಮಹತ್ವದ ಸಭೆ
ವಿಮಾನ ನಿಲ್ದಾಣದಿಂದ ಭದ್ರಾವತಿ ವಿಐಎಸ್‌ಎಲ್ ವಸತಿ ಗೃಹಕ್ಕೆ ತೆರಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಸಭೆ ನಡೆಸಿದರು. ವಿಐಎಸ್‌ಎಲ್‌ಗೆ ಅಗತ್ಯ ಬಂಡವಾಳ ಹೂಡಿಕೆ ಹಾಗೂ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಶಾರದಾ ಪೂರ್ಯನಾಯಕ್, ಭೋಜೆಗೌಡ, ಮಂಗೋಟೆ ರುದ್ರೇಶ್, ಧರ್ಮ ಪ್ರಸಾದ್, ಶಾರದಾ ಅಪ್ಪಾಜಿ ಅವರು ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದದರು.

ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ
ಸಭೆ ಬಳಿಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಐಎಸ್‌ಎಲ್ ಕಾರ್ಖಾನೆಗೆ ಭೇಟಿ ನೀಡಿದ್ದರು. ಕಾರ್ಖಾನೆ ಆವರಣದಲ್ಲಿರುವ ಸರ್. ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅಲ್ಲದೆ ಕಾರ್ಖಾನೆಯ ವಿವಿಧ ಘಟಕಗಳಿಗೆ ಕುಮಾರಸ್ವಾಮಿ ಭೇಟಿ ನೀಡಿರ ಪರಿಶೀಲನೆ ನಡೆಸಿದರು. ಇದೇ ವೇಳೆ ಕಾರ್ಮಿಕರ ಜೊತೆಗು ಚರ್ಚೆ ನಡೆಸಿದರು.

ಸಭೆ ಬಹಿಷ್ಕರಿಸಿದ ಮಾಧ್ಯಮಗಳು
ವಿಐಎಸ್‌ಎಲ್ ವಸತಿಗೃಹದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಭೆ ನಡೆಸಿದರು. ವಸತಿ ಗೃಹದ ಆವರಣದೊಳಗೆ ಮತ್ತು ಸಭೆ ನಡೆಯುತ್ತಿದ್ದ ಸಭಾಂಗಣದೊಳಗೆ ರಾಜಕೀಯ ಪಕ್ಷಗಳ ಕಾರ್ಯಕರ್ತರು, ರಾಜಕಾರಣಿಗಳ ಹಿಂಬಾಲಕರಿಗೆ ಸುಲಭಕ್ಕೆ ಪ್ರವೇಶ ನೀಡಲಾಗಿತ್ತು. ಆದರೆ ವಿಐಎಸ್‌ಎಲ್‌ನ ಭದ್ರತಾ ಸಿಬ್ಬಂದಿ ವಾರ್ತಾ ಇಲಾಖೆಯ ವಾಹನ ವಸತಿಗೃಹದ ಆವರಣ ಪ್ರವೇಶಿಸಲು ಅನುಮತಿ ನಿರಾಕರಿಸಿದರು. ಕೊನೆಗೆ ಸಂಸದ ರಾಘವೇಂದ್ರ ಅವರ ಸೂಚನೆ ಮೇರೆಗೆ ವಾಹನವನ್ನು ವಸತಿ ಗೃಹದ ಆವರಣಕ್ಕೆ ಬಿಡಲಾಯಿತು.
ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್ ನಿರಂತರ ವರದಿ ಬಳಿಕ ರಸ್ತೆ ಗುಂಡಿಗಳು ಬಂದ್
ಇನ್ನು ಸಭೆ ನಡೆಯುತ್ತಿದ್ದ ಸಭಾಂಗಣದೊಳಗು ಮಾಧ್ಯಮ ಪ್ರತಿನಿಧಿಗಳಿಗೆ ನಿರ್ಬಂಧಿಸಲಾಯಿತು. ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿ ಅವರೆ ಸಭೆಯ ಆರಂಭದ ಒಂದೆರಡು ನಿಮಿಷದ ಚಿತ್ರೀಕರಣಕ್ಕೆ ಅನುಮತಿಸಿದರು. ಆದರೆ ಕೆಲವು ಭದ್ರತಾ ಸಿಬ್ಬಂದಿ ಪ್ರವೇಶ ದ್ವಾರದಲ್ಲಿಯೇ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಅನುಚಿತವಾಗಿ ವರ್ತಿಸಿದರು. ಕೇಂದ್ರ ಸಚಿವರ ಮಾಧ್ಯಮ ತಂಡ, ಸಂಸದ ರಾಘವೇಂದ್ರ ಅವರ ಮಾಧ್ಯಮ ತಂಡದವರನ್ನು ವಿಐಎಸ್‌ಎಲ್ ಭದ್ರತಾ ಸಿಬ್ಬಂದಿ ತಳ್ಳಾಡಿದರು. ಇದೇ ಕಾರಣಕ್ಕೆ ಮಾಧ್ಯಮ ಪ್ರತಿನಿಧಿಗಳು ಸಭೆ ಬಹಿಷ್ಕರಿಸಿದರು.

LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





