ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ : ಮೈಸೂರು ಪೇಪರ್ ಮಿಲ್ಸ್ (ಎಂ.ಪಿ.ಎಂ) ಕಾರ್ಖಾನೆ (Factory) ಪುನಾರಂಭಕ್ಕೆ ಶಾಸಕ ಸಂಗಮೇಶ್ವರ ಅವರು ಸರ್ಕಾರದೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಅಗತ್ಯ ಬಿದ್ದರೆ ಶಾಸಕರೊಂದಿಗೆ ದೆಹಲಿಗೆ ತೆರಳಿ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಭದ್ರಾವತಿಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಘಟನಾ ಸಭೆ ಉದ್ಘಾಟಿಸಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
ರಾಜ್ಯದಲ್ಲಿ ಹಣಕಾಸು ಕೊರತೆ ಇಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದೆ. ಹಣದ ಕೊರತೆ ಉಂಟಾಗಿದ್ದರೆ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಬಿಸಿಯೂಟ, ಮೊಟ್ಟೆಯನ್ನು ನೀಡಲು ಸಾಧ್ಯವಾಗುತ್ತಿತ್ತೆ. ಇನ್ನು, ಭದ್ರಾವತಿ ಸೇರಿದಂತೆ ಯಾವುದೇ ಭಾಗದಲ್ಲಿ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದರು.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸಂಘಟಿತವಾಗಿ ಕೆಲಸ ಮಾಡಿ, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಕಾರ್ಯಕರ್ತರ ಆತ್ಮವಿಶ್ವಾಸ ಹೆಚ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಣತಿಯಂತೆ ಕಾರ್ಯಕರ್ತರ ಸಭೆ ನಡೆಸಲಾಗುತ್ತಿದೆ.
– ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ
ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಯಾರಿಗೇ ಟಿಕೆಟ್ ನೀಡಿದರು ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಬೇಕು. ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು.
– ಬಿ.ಕೆ.ಸಂಗಮೇಶ್ವರ, ಭದ್ರಾವತಿ ಶಾಸಕ

ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಣಿಶೇಖರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಪಕ್ಷದ ನಗರ ಅಧ್ಯಕ್ಷ ಎಸ್.ಕುಮಾರ್, ನಗರಸಭೆ ಸದಸ್ಯ ಬಿ.ಕೆ.ಮೋಹನ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಗಾಜನೂರಿನಲ್ಲಿ ನಡುರಾತ್ರಿ ಕೇಳಿತು ಶಬ್ದ, ಹೊರಗೆ ಕಾಣಿಸ್ತು ಸ್ಯಾಂಟ್ರೋ ಕಾರ್, ಮೊಬೈಲ್‌ನಲ್ಲಿ ದೃಶ್ಯ ಸೆರೆ, ಏನಿದು ಕೇಸ್?
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು





