ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MARCH 2021
ಕಬಡ್ಡಿ ಪಂದ್ಯಾವಳಿ ವೇಳೆ ಗಲಾಟೆ, ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವ ಬೆನ್ನಿಗೆ, ಶಾಸಕ ಸಂಗಮೇಶ್ವರ್ ಮತ್ತು ಅವರ ಕುಟುಂಬದವರನ್ನು ಬಂಧಿಸಲಾಗಿದೆ ಎಂದು ವಿಡಿಯೋ ವೈರಲ್ ಮಾಡಲಾಗಿದೆ.
ಹಳೆ ವಿಡಿಯೋಗೆ ಮರು ಜೀವ
ಈ ಹಿಂದೆ ಶಾಸಕ ಸಂಗಮೇಶ್ವರ್ ಅವರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಆ ವಿಡಿಯೋವನ್ನು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಕಬಡ್ಡಿ ಪಂದ್ಯಾವಳಿ ವೇಳೆ ಗಲಾಟೆ ಹಿನ್ನೆಲೆಯಲ್ಲಿ ಸಂಗಮೇಶ್ವರ್ ಮತ್ತು ಅವರ ಕುಟುಂಬದವರನ್ನು ಬಂಧಿಸಲಾಗಿದೆ ಎಂದು ಮೆಸೇಜು ಹರಿಬಿಡಲಾಗಿದೆ.
ಶಾಸಕ ಸಂಗಮೇಶ್ವರ್ ಈಗ ಎಲ್ಲಿದ್ದಾರೆ?
ಭದ್ರಾವತಿಯಲ್ಲಿ ಶಾಸಕ ಸಂಗಮೇಶ್ವರ್ ಅವರು ಕಾಣಿಸದೆ ಇರುವುದರಿಂದ ವಿಡಿಯೋ ನಿಜ ಎಂದು ನಂಬಿಕೊಂಡವರೆ ಹೆಚ್ಚು. ಬಜೆಟ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಸಂಗಮೇಶ‍್ವರ್ ಅವರು ಬೆಂಗಳೂರಿಗೆ ತೆರಳಿದ್ದಾರೆ. ಇದೆ ಸಮಯದಲ್ಲಿ ವಿಡಿಯೋ ವೈರಲ್ ಮಾಡಲಾಗಿದೆ.
ಶಾಸಕ ಸಂಗಮೇಶ್ವರ್ ಸ್ಪಷ್ಟನೆ ಏನು?
ತಮ್ಮನ್ನು ಬಂಧಿಸಲಾಗಿದೆ ಎಂದು ಸಾಮಾಜಿಕ ಜಾಲತಣದಲ್ಲಿ ಕಿಡಿಗೇಡಿಗಳು ಸಂದೇಶ ರವಾನಿಸಿದ್ದಾರೆ. ತಾವಾಗಲಿ ತಮ್ಮ ಕುಟುಂಬದವರಾಗಲಿ ಬಂಧನಕ್ಕೆ ಒಳಗಾಗುವಂತಹ ತಪ್ಪು ಮಾಡಿಲ್ಲ. ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದೇನೆ. ವದಂತಿಗಳಿಗೆ ಕ್ಷೇತ್ರದ ಜನರು ಕಿವಿಗೊಡಬಾರದು ಎಂದು ಶಾಸಕ ಸಂಗಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ | ಭದ್ರಾವತಿಯಲ್ಲಿ ನಿಷೇಧಾಜ್ಞೆ, ಸಿಟಿಯಲ್ಲಿ ಹೇಗಿದೆ ಪರಿಸ್ಥಿತಿ?
ಇದನ್ನೂ ಓದಿ | ಭದ್ರಾವತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ, ಬಿಜೆಪಿಗೆ ಶಾಸಕ ಸಂಗಮೇಶ್ವರ್ ಸವಾಲು
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422