ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 ಅಕ್ಟೋಬರ್ 2020
ಎಂಪಿಎಂ ಕ್ವಾರ್ಟರ್ಸ್ಗಳಲ್ಲಿ ವಾಸವಾಗಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು ಮನೆ ಮತ್ತು ನಗರಾಡಳಿತ ವ್ಯಾಪ್ತಿಯ ಅಂಗಡಿ ಮಳಿಗೆಗಳನ್ನು ಖಾಲಿ ಮಾಡುವಂತೆ ನೊಟೀಸ್ ಜಾರಿ ಮಾಡಲಾಗಿದೆ.
ನವೆಂಬರ್ 30 ಕೊನೆಗೆ ದಿನ
ನಿವಾಸಿಗಳು ಬಾಕಿ ಬಾಡಿಗೆಯನ್ನು ಪಾವತಿ ಮಾಡಿ ಕೂಡಲೆ ಖಾಲಿ ಮಾಡಬೇಕು ಎಂದು ನೊಟೀಸ್ನಲ್ಲಿ ತಿಳಿಸಲಾಗಿದೆ. ನವೆಂಬರ್ 30ರವರೆಗೆ ಗಡುವು ನೀಡಲಾಗಿದೆ. ಇಲ್ಲದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಆಡಳಿತಾಧಿಕಾರಿಗಳು ನೊಟೀಸ್ನಲ್ಲಿ ಎಚ್ಚರಿಸಿದ್ದಾರೆ.
ಖಾಲಿ ಮಾಡಿಸಲು ಕಾರಣವೇನು?
ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲಾಗಿದೆ. ಹಾಗಾಗಿ ಕಾರ್ಖಾನೆ ಜಾಗದಲ್ಲಿ ಇರುವ ಮನೆಗಳು, ಅಂಗಡಿಗಳನ್ನು ತೆರವು ಮಾಡಿಸಬೇಕು ಎಂದು ನಿರ್ಧರಿಸಲಾಗಿದೆ. ಈ ಸಂಬಂಧ ಜುಲೈ 1ರಂದು ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆದ್ದರಿಂದ ನಿವಾಸಿಗಳಿಗೆ ನೊಟೀಸ್ ನೀಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]