ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
BHADRAVATHI, 31 JULY 2024 : ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸುತ್ತಿರುವುದರಿಂದ ಭದ್ರಾವತಿಯ ಹೊಸ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿದು ಹೋಗುತ್ತಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಭದ್ರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಪೊಲೀಸರು ಹೊಸ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಿದ್ದರು. ಸೇತುವೆಯ ಎರಡು ಬದಿಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಇವತ್ತು ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಸೇತುವೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದೆ. ಮರದ ದಿಮ್ಮಿಗಳು ಸೇತುವೆಗೆ ಬಡಿದು, ಸಿಲುಕಿಕೊಂಡಿವೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೇತುವೆ ನೋಡಲು ಜನವೋ ಜನ
ಇನ್ನು, ಸೇತುವೆ ಮೇಲೆ ನೀರು ಹರಿದು ಹೋಗುತ್ತಿರುವುದನ್ನು ನೋಡಲು ಭದ್ರಾವತಿ ಪಟ್ಟಣದ ವಿವಿಧೆಡೆಯ ಜನರು ಸೇತುವೆ ಬಳಿ ಆಗಮಿಸುತ್ತಿದ್ದಾರೆ. ಫೋಟೊ, ವಿಡಿಯೋ ಕ್ಲಿಕ್ಕಿಸುತ್ತಿದ್ದಾರೆ. ಜನರು ಬ್ಯಾರಿಕೇಡ್ ದಾಟಿ ಹೋಗದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಬಡಾವಣೆಗಳು ಜಲಾವೃತ, ಕಾಳಜಿ ಕೇಂದ್ರ ಆರಂಭ
ಇನ್ನು, ಭದ್ರಾ ನದಿ ಪಾತ್ರದ ವಿವಿಧ ಬಡಾವಣೆಗಳಿಗೆ ನೀರು ನುಗ್ಗಿದೆ. ಮನೆಗಳು ಜಲಾವೃತವಾಗಿವೆ. ಗುಂಡೂರಾವ್ ಶೆಡ್, ಕಾವಲ್ ಗುಂದಿ ಏರಿಯಾ, ಅಂಬೇಡ್ಕರ್ ನಗರ, ಗೌಳಿಗರ ಬೀದಿ ಸೇರಿದಂತೆ ವಿವಿಧೆಡೆ ನೀರು ನುಗ್ಗಿದೆ. ಈ ಹಿನ್ನೆಲೆ ನಗರಸಭೆ ವತಿಯಿಂದ ಮೂರು ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಸದ್ಯ ಒಂದು ಕಾಳಜಿ ಕೇಂದ್ರದಲ್ಲಿ ಮಾತ್ರ ಜನರಿದ್ದಾರೆ. ಒಕ್ಕಲಿಗರ ಸಭಾ ಭವನದಲ್ಲಿ ಕಾಳಜಿ ಕೇಂದ್ರದಲ್ಲಿ 32 ಕುಟುಂಬಗಳ 121 ಜನರನ್ನು ರಕ್ಷಿಸಲಾಗಿದೆ. ಅವರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. ಸೋಪು, ಪೇಸ್ಟ್, ಬೆಡ್ ಶೀಟ್ ವ್ಯವಸ್ಥೆ ಮಾಡಲಾಗಿದೆ.