ಭದ್ರಾವತಿ: VISL ಕಾರ್ಖಾನೆ ನೂತನ ಕಾರ್ಯಪಾಲಕ ನಿರ್ದೇಶಕರಾಗಿ ಅನೂಪ್ ಕುಮಾರ್ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಂದ್ವಾನಿ ಅವರು ಅಧಿಕಾರ ವರ್ಗಾಯಿಸಿದರು. ನಂತರ ಕಾರ್ಖಾನೆ ಆಡಳಿತ ಮಂಡಳಿ ಆವರಣ ದಲ್ಲಿರುವ ಸರ್.ಎಂ.ವಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಅನೂಪ್ ಕುಮಾರ್ ಅವರು ಬಿಎಸ್ಸಿ ಎಂಜಿನಿಯರಿಂಗ್ (ಲೋಹಶಾಸ್ತ್ರ) ಪದವೀಧರರಾಗಿದ್ದು, ಇಂದೋರ್‌ನಲ್ಲಿ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪ್ರಮಾಣಪತ್ರ ಪಡೆದಿದ್ದಾರೆ. ಪಶ್ಚಿಮ ಬಂಗಾಳದ ಬರ್ನ್‌ಪುರದಲ್ಲಿರುವ ಇಸ್ಕೋ ಸ್ಟೀಲ್ ಪ್ಲಾಂಟ್‌ನಲ್ಲಿ ಮ್ಯಾನೇಜ್‌ಮೆಂಟ್ ಟ್ರೈನಿಯಾಗಿ, 2017ರಲ್ಲಿ ಜನರಲ್ ಮ್ಯಾನೇಜರ್ ಮತ್ತು 2022ರಲ್ಲಿ ಕಾರ್ಯಪಾಲಕ ನಿರ್ದೇಶಕ (ಕೊಲಿಯರೀಸ್) ಹುದ್ದೆಗೆ ಭಾಜನರಾಗಿದ್ದಾರೆ.

ಬ್ಲಾಸ್ಟ್ ಫರ್ನೇಸ್‌ನಲ್ಲಿ 17 ವರ್ಷಗಳ ಪರಿಣತಿ ಹೊಂದಿದ್ದಾರೆ. ಕಳೆದ 34 ವರ್ಷಗಳಲ್ಲಿ ಅವರು ಸೈಲ್ -ಐಎಸ್‌ಪಿ ಬರ್ನ್‌ಪುರ, ಬಿಎಸ್‌ಎಲ್, ಬೊಕಾರೋ, ಕೊಲಿಯರೀಸ್ ವಿಭಾಗ ಮತ್ತು ಸೈಲ್ ಸುರಕ್ಷತಾ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಇದನ್ನೂ ಓದಿ » ಸಹ್ಯಾದ್ರಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ, ದಿನಾಂಕ ಪ್ರಕಟ, ಯಾವಾಗ? ಎಲ್ಲಿ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





