ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 4 JULY 2023
BHADRAVATHI : ನಗರಸಭೆ ಅಧ್ಯಕ್ಷೆಯಾಗಿ (President) 30ನೇ ವಾರ್ಡ್ ಸದಸ್ಯೆ ಶ್ರುತಿ ವಂಸತಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷೆಗೆ ಶಾಸಕ ಬಿ.ಕೆ.ಸಂಗಮೇಶ್ವರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ನಗರಸಭೆ ಸದಸ್ಯರು ಶುಭ ಕೋರಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ತೆರವಾಗಿದ್ದ ನಗರಸಭೆ ಅಧ್ಯಕ್ಷ (President) ಸ್ಥಾನಕ್ಕೆ ಚುನಾವಣೆಗೆ ಶ್ರುತಿ ವಸಂತಕುಮಾರ್ ಅವರ ಹೊರತು ಮತ್ತಿನ್ಯಾರು ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆ ಚುನಾವಣಾಧಿಕಾರಿಯಾದ ಉಪ ವಿಭಾಗಾಧಿಕಾರಿ ರವಿಚಂದ್ರ ನಾಯಕ್ ಅವರು, ಶ್ರುತಿ ವಸಂತ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ ಎರಡು ದಿನ ಆರೆಂಜ್ ಅಲರ್ಟ್, ಇನ್ನೆರಡು ದಿನ ಯಲ್ಲೋ ಅಲರ್ಟ್
ಪಟಾಕಿ ಸಿಡಿಸಿ, ಸಿಹಿ ಹಂಚಿದರು
ಶ್ರುತಿ ವಸಂತಕಮಾರ್ ಅವರು ನಗರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ನೂತನ ಅಧ್ಯಕ್ಷರಿಗೆ ಶುಭ ಕೋರಿದರು. ಈ ಸಂದರ್ಭ ನಗರಸಭೆ ಉಪಾಧ್ಯಕ್ಷೆ ಸರ್ವ ಮಂಗಳಾ ಭೈರಪ್ಪ, ನಗರಸಭೆ ಸದಸ್ಯರು ಹಾಜರಿದ್ದರು.
ಮೊದಲ ಬಾರಿ ಸದಸ್ಯೆಗೆ ಅಧ್ಯಕ್ಷ ಗಾದಿ
ನಗರಸಭೆಯ 30ನೇ ವಾರ್ಡ್ನಿಂದ ಶ್ರುತಿ ವಸಂತಕುಮಾರ್ ಅವರು ಮೊದಲ ಬಾರಿ ಆಯ್ಕೆಯಾಗಿದ್ದು, ಇದೆ ಅವಧಿಯಲ್ಲೆ ಅಧ್ಯಕ್ಷರಾಗುವ ಅದೃಷ್ಟ ಒಲಿದು ಬಂದಿದೆ. ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಅರ್ಹರಿಗೆ ಅಧಿಕಾರ ಲಭಿಸಬೇಕು ಎಂಬ ಒಪ್ಪಂದದ ಪ್ರಕಾರ ಅಧಿಕಾರ ಹಂಚಿಕೆ ಮಾಡಿಕೊಳ್ಳಲಾಗುತ್ತಿದೆ. ಅದರಂತೆ ಗೀತಾ ರಾಜಕುಮಾರ್, ಅನುಸುಧಾ ಮೋಹನ್ ಅವರು ಈಗಾಗಲೆ ನಗರಸಭೆ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ.