ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಚಾಕು, ಲಾಂಗ್, ವಿಕೆಟ್ ಹಿಡಿದು ನಡುರಾತ್ರಿ ವಾಹನಗಳನ್ನು ಅಡ್ಡಗಟ್ಟಿ ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಶಿವರಾಮ ನಗರ ಮತ್ತು ಮಾಚೇನಹಳ್ಳಿ ನಡುವೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಅರೆಸ್ಟ್ (Arrest) ಮಾಡಿದ್ದಾರೆ.
ಲೋಕೇಶ್, ಅಕಾಶ್, ಸುಂದರ್, ಸುಜಿತ್, ದಿಲೀಪ್ ಬಂಧಿತರು. ರಸ್ತೆಯಲ್ಲಿ ಓಮ್ನಿ ಕಾರು ನಿಲ್ಲಿಸಿಕೊಂಡು ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದರು. ಪೊಲೀಸರು ದಾಳಿ ನಡೆಸಿದಾಗ ಐವರು ಪರಾರಿಯಾಗಲು ಯತ್ನಿಸಿದ್ದರು.
ಮಜಾ ಮಾಡೋಕೆ ದರೋಡೆ ಪ್ಲಾನ್
ಆರೋಪಿಗಳು ಭದ್ರಾವತಿಯ ವಿವಿಧೆಡೆ ದನಗಳ್ಳತನ ಮಾಡಿದ್ದರು. ಅವುಗಳ ಮಾರಾಟದಿಂದ ಬಂದ ಹಣದಲ್ಲಿ ಮಜಾ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರಿಗೆ ಅನುಮಾನ ಬಂದ ಹಿನ್ನೆಲೆ ದನಗಳ್ಳತನ ಬಿಟ್ಟು ದರೋಡೆಗೆ ಹೊಂಚು ಹಾಕಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಸಂಬಂಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಆನಂದಪುರದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ, ಧಗಧಗ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















