ಚಾಕು, ಲಾಂಗ್‌, ವಿಕೆಟ್‌ ಹಿಡಿದು ಭದ್ರಾವತಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್‌ ಮೇಲೆ ಪೊಲೀಸ್‌ ದಾಳಿ

ಭದ್ರಾವತಿ: ಚಾಕು, ಲಾಂಗ್‌, ವಿಕೆಟ್‌ ಹಿಡಿದು ನಡುರಾತ್ರಿ ವಾಹನಗಳನ್ನು ಅಡ್ಡಗಟ್ಟಿ ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್‌ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಶಿವರಾಮ ನಗರ ಮತ್ತು ಮಾಚೇನಹಳ್ಳಿ ನಡುವೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಅರೆಸ್ಟ್‌ (Arrest) ಮಾಡಿದ್ದಾರೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಲೋಕೇಶ್‌, ಅಕಾಶ್‌, ಸುಂದರ್‌, ಸುಜಿತ್‌, ದಿಲೀಪ್‌ ಬಂಧಿತರು. ರಸ್ತೆಯಲ್ಲಿ ಓಮ್ನಿ ಕಾರು ನಿಲ್ಲಿಸಿಕೊಂಡು ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದರು. ಪೊಲೀಸರು ದಾಳಿ ನಡೆಸಿದಾಗ ಐವರು ಪರಾರಿಯಾಗಲು ಯತ್ನಿಸಿದ್ದರು.

ಮಜಾ ಮಾಡೋಕೆ ದರೋಡೆ ಪ್ಲಾನ್‌

ಆರೋಪಿಗಳು ಭದ್ರಾವತಿಯ ವಿವಿಧೆಡೆ ದನಗಳ್ಳತನ ಮಾಡಿದ್ದರು. ಅವುಗಳ ಮಾರಾಟದಿಂದ ಬಂದ ಹಣದಲ್ಲಿ ಮಜಾ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರಿಗೆ ಅನುಮಾನ ಬಂದ ಹಿನ್ನೆಲೆ ದನಗಳ್ಳತನ ಬಿಟ್ಟು ದರೋಡೆಗೆ ಹೊಂಚು ಹಾಕಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆ ಸಂಬಂಧ ನ್ಯೂ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಆನಂದಪುರದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ, ಧಗಧಗ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು

Leave a Comment