ಶಿವಮೊಗ್ಗ ಲೈವ್
ಭದ್ರಾವತಿ: ಅ.12ರಂದು ನಗರದಲ್ಲಿ ಹಮ್ಮಿಕೊಂಡಿರುವ ರೈತ ಸ್ವಾಭಿಮಾನಿ ಯಾತ್ರೆ ನಡೆಯಲಿದೆ. ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಹೇಳಿದರು.
ಯಾತ್ರೆ ಅಂಗವಾಗಿ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿಯವರೆಗೆ ಮಧ್ಯಾಹ್ನ 3 ಗಂಟೆಯಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಸಂಜೆ 4 ಗಂಟೆಗೆ ತಾಲ್ಲೂಕು ಕಚೇರಿ ಆವರಣದಲ್ಲಿ ಬಹಿರಂಗ ಸಭೆ ನಡೆಸಲಾಗುತ್ತದೆ. ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಚಂದ್ರೇಗೌಡ, ಆರ್.ಕರುಣಾಮೂರ್ತಿ ಉಪಸ್ಥಿತರಿದ್ದರು.