ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಭದ್ರಾವತಿ: ಕರ್ನಾಟಕ ಪವರ್ ಲಿಫ್ಟಿಂಗ್ (Power Lifting) ಸೋಸಿಯೇಷನ್ ಹಾಗೂ ಶಿವಮೊಗ್ಗ ಡಿಸ್ಟ್ರಿಕ್ಟ್ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭದ್ರಾವತಿಯ ಕಾರಂತ್ ವ್ಯಾಯಾಮ ಶಾಲೆಯ ಕೀಡಾಪಟು ಎಂ.ಬಿ ನಿತಿನ್ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದಿದ್ದಾರೆ.
ಸಾಗರದ ಒಕ್ಕಲಿಗರ ಸಂಘದಲ್ಲಿ ಸಾಧನಾ ಮಲ್ಟಿ ಜಿಮ್ ಸಹಯೋಗದೊಂದಿಗೆ ನಡೆದ ಸ್ಪರ್ಧೆಯ 80 ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಚಿನ್ನದ ಪದಕ ಪಡೆದಿರುವ ನಿತಿನ್ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಗುತ್ತಿಗೆ ಕಾರ್ಮಿಕರ ಸಂಘದ ಉಪಾಧ್ಯಕ್ಷ ಮಂಜುನಾಥ್ ಅವರ ಪುತ್ರ. ಇವರನ್ನು ಕಾರಂತ್ ವ್ಯಾಯಾಮ ಶಾಲೆಯ ಪ್ರಕಾಶ್ ಕಾರಂತ್, ಪವರ್ ಲಿಫ್ಟರ್ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು, ಗಣ್ಯರು, VISL ಕಾರ್ಮಿಕರು ಅಭಿನಂದಿಸಿದ್ದಾರೆ.

ಇದನ್ನೂ ಓದಿ » ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಶರಾವತಿ ಹಿನ್ನೀರಿನತ್ತ ಪಲ್ಟಿಯಾದ ಕಾರು, ವ್ಯಕ್ತಿ ಸಾವು, ಹೇಗಾಯ್ತು ಘಟನೆ?

