SHIVAMOGGA LIVE NEWS | 8 DECEMBER 2023
SHANKARAGATTA : ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಕುವೆಂಪು ವಿಶ್ವವಿದ್ಯಾಲಯ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ (ಎನ್ಎಸ್ಯುಐ) ಎಚ್ಚರಿಸಿದೆ. ಈ ಸಂಬಂಧ ಕುವೆಂಪು ವಿವಿ ಕಲುಪತಿಗೆ ಮನವಿ ಸಲ್ಲಿಸಿದೆ.
![]() |
ಎರಡು ಪ್ರಮುಖ ಬೇಡಿಕೆಗಳು
ಬೇಡಿಕೆ 1 : ಉಳಿಕೆ ಸೀಟು ಹಂಚಿಕೆ ಮಾಡಿ
ಪ್ರಸಕ್ತ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶ ಮುಕ್ತಾಯವಾಗಿದೆ. ವಿವಿಧ ಕೋರ್ಸುಗಳಿಗೆ ಪರಿಶಿಷ್ಟ ಜಾತಿ, ಪಂಗಡ ಮತ್ತು ಅಂಗವಿಕಲ ಕೋಟಾದಡಿ ಮೀಸಲಾಗಿದ್ದ ಸೀಟುಗಳು ಸಂಪೂರ್ಣ ಭರ್ತಿಯಾಗಿಲ್ಲ. ಹಾಗಾಗಿ ಖಾಲಿ ಉಳಿದಿರುವ ಸೀಟುಗಳನ್ನು ಇತರೆ ವರ್ಗದ ಆಕಾಂಕ್ಷಿಗಳಿಗೆ ಹಂಚಿಕೆ ಮಾಡಬೇಕು. ಇದಕ್ಕಾಗಿ ಮತ್ತೊಮ್ಮೆ ಕೌನ್ಸಿಲಿಂಗ್ ನಡೆಸಬೇಕು.
ಬೇಡಿಕೆ 2 : ಅತಿಥಿ ಉಪನ್ಯಾಸಕರನ್ನು ನೇಮಿಸಿ
ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ. ಕಾಲೇಜು ಆರಂಭವಾಗುವ ಮೊದಲೆ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿತ್ತು. ಆದರೆ ಈ ಬಾರಿ ಸೆಮಿಸ್ಟರ್ ಮುಕ್ತಾಯ ಹಂತಕ್ಕೆ ಬಂದಿದ್ದರು ನೇಮಕಾತಿ ಆಗಿಲ್ಲ. ಇದರಿಂದ ಪಾಠಗಳು ಮುಗಿಯದೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ತಕ್ಷಣ ಎಲ್ಲ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು.
ತಮ್ಮ ಬೇಡಿಕೆ ಈಡೇರಿಸದೆ ಇದ್ದಲ್ಲಿ ಕುವೆಂಪು ವಿಶ್ವವಿದ್ಯಾಲಯವನ್ನು ಬಂದ್ ಮಾಡಿ ಹೋರಾಟ ತೀವ್ರಗೊಳಿಸಲಾಗುತ್ತದೆ ಎಂದು ಎನ್ಎಸ್ಯುಐ ಕಾರ್ಯಕರ್ತರು ಎಚ್ಚರಿಸಿದರು. ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಪ್ರಮುಖರಾದ ಹರ್ಷಿತ್, ಮುರುಗೇಶ್, ನಿಖಿಲ್ ಕೀರ್ತಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಗಾಜನೂರು ಶಾಲೆಗೆ ಹಣ್ಣು ಸಾಗಿಸುತ್ತಿದ್ದ ಗೂಡ್ಸ್ ಗಾಡಿಗೆ ಕಾರು ಡಿಕ್ಕಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200