ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್‌ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಂಕರಘಟ್ಟ: ನಿಗದಿತ ಸಮಯಕ್ಕೆ ಪರೀಕ್ಷೆ ಫಲಿತಾಂಶ ಪ್ರಕಟಿಸಬೇಕು. ಫಲಿತಾಂಶದಲ್ಲಿ ನಿರಂತರವಾಗಿ ಕಂಡು ಬರುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದಿಂದ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ (Protest) ನಡೆಸಲಾಯಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎನ್‌ಎಸ್‌ಯುಐ ಬೇಡಿಕೆಗಳೇನು?

  • ಕುವೆಂಪು ವಿವಿಯ ರಂಭಾಪುರಿ ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಕೊಠಡಿಗಳಲ್ಲಿ ಮಳೆ ನೀರು ಸೋರುತ್ತಿದೆ. ಕಳೆದ 2 ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಸ್ಪಂದಿಸುತ್ತಿಲ್ಲ.

NSUI-protest-at-Kuvempu-University

  • ಕಾಲೇಜಿನಲ್ಲಿ ಬಿಸಿಎ ಪದವಿಗೆ ಸರ್ಕಾರಿ ಸೀಟುಗಳಿದ್ದರೂ ಮನಬಂದಂತೆ ಪ್ರವೇಶ ಶುಲ್ಕ ವಿಧಿಸಲಾಗುತ್ತಿದೆ.
  • ರಾಷ್ಟ್ರೀಯ ಹಬ್ಬಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿಲ್ಲ. ಈ ಬಗ್ಗೆ ವಿದ್ಯಾರ್ಥಿ ಗಳು ಪ್ರಶ್ನಿಸಿದರೆ, ವಿವಿಯಿಂದ ಸಹಕಾರ ದೊರೆಯುತ್ತಿಲ್ಲ ಎಂದು ಪ್ರಾಂಶುಪಾಲರು ಹೇಳುತ್ತಿದ್ದಾರೆ.
  • ವಿವಿ ಅಡಿಯ ಎಲ್ಲ ಕಾಲೇಜುಗಳ ಫಲಿತಾಂಶ ನಿಗದಿತ ಸಮಯಕ್ಕೆ ಪ್ರಕಟವಾಗುತ್ತಿಲ್ಲ. ಈ ಬಗ್ಗೆ ಕೂಡಲೆ ಸೂಕ್ತ ಕ್ರಮ ವಹಿಸಬೇಕು. ಫಲಿತಾಂಶ ವಿಳಂಬದಿಂದಾಗಿ ಎಂಸಿಎ ಮತ್ತು ಎಂಕಾಂ ಪ್ರವೇಶಕ್ಕೆ ತೊಂದರೆಯಾಗಿದೆ.

NSUI-protest-at-Kuvempu-University

  • ಒಂದು ಬಾರಿ ಪಾಸ್ ಎಂದು, ಇನ್ನೊಂದು ಬಾರಿ ಫೇಲ್ ಎಂದು ತೋರಿಸುತ್ತಿದೆ. ಇದನ್ನು ಸರಿಪಡಿಸಿಕೊಳ್ಳಲು ವಿದ್ಯಾರ್ಥಿಗಳು ಸ್ವಂತ ಖರ್ಚಿನಲ್ಲಿ ವಿವಿಗೆ ಹೋಗುವಂತಾಗಿದೆ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, MBBS ವಿದ್ಯಾರ್ಥಿಗಳು ಸಾವು, ರಸ್ತೆ ಮೇಲೆ ಹರಿದ ಹಾಲು, ನೆತ್ತರು

  • ಎಲ್ಲ ಸಮಸ್ಯೆಗಳನ್ನು 15 ದಿನದಲ್ಲಿ ಬಗೆಹರಿಸಬೇಕು. ಇಲ್ಲವಾದಲ್ಲಿ ಕುವೆಂಪು ವಿವಿ ಬಂದ್‌ಗೆ ಕರೆ ನೀಡಲಾಗುತ್ತದೆ.

NSUI-protest-at-Kuvempu-University

  • ತಮ್ಮ ಬೇಡಿಕೆ ಈಡೇರಿಸುವಂತೆ ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಕುಲಸಚಿವ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು.

ಕುವೆಂಪು ವಿವಿ ಎನ್‌ಎಸ್‌ಯುಐ ಘಟಕದ ಅಧ್ಯಕ್ಷ ಮುರುಗೇಶ್, ಪ್ರಮುಖರಾದ ರವಿ ಕಾಟಿಕೆರೆ, ರವಿ, ಚಂದ್ರೋಜಿರಾವ್‌, ವರುಣ್ ವಿ. ಪಂಡಿತ್, ಸುಭಾನ್, ಫರಾದ್, ಆದಿತ್ಯ, ಶ್ರೀಕಾಂತ್, ಕೀರ್ತಿ ಸೇರಿದಂತೆ ವಿದ್ಯಾರ್ಥಿಗಳಿದ್ದರು.

NSUI-protest-at-Kuvempu-University

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment