ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯವು ಡಿಜಿಟಲ್ ರೂಪದಲ್ಲಿ ನಡೆಸಿದ ಮೌಲ್ಯಮಾಪನದಲ್ಲಿ ಸಾಕಷ್ಟು ಲೋಪಗಳಿವೆ. ಆದ್ದರಿಂದ ಮರುಮೌಲ್ಯಮಾಪನ (Valuation) ಮಾಡಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ವತಿಯಿಂದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿ ಕಾಲೇಜಿನಲ್ಲಿ 50 ರಿಂದ 60 ವಿದ್ಯಾರ್ಥಿಗಳು 0,5,6,7 ಅಂಕಗಳನ್ನು ಪಡೆದು ಅನುತ್ತೀರ್ಣ ಗೊಂಡಿದ್ದಾರೆ ಹಾಗೂ ಉತ್ತೀರ್ಣ ಗೊಂಡ ಸಾಕಷ್ಟು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ. ವಿಶ್ವ ವಿದ್ಯಾಲಯದ ಪರೀಕ್ಷಾಂಗ ವಿಭಾಗವು ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ. ಪರೀಕ್ಷಾ ಶುಲ್ಕ, ಮರುಮೌಲ್ಯ ಮಾಪನ ಎಂದು ವಿದ್ಯಾರ್ಥಿಗಳಿಂದ ವಸೂಲಿ ಮಾಡಿಯು ಸಹ ಫಲಿತಾಂಶದ ಜೊತೆ ಆಟವಾಡುತ್ತಾ ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡುತ್ತಿದೆ ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ವಿವಿಯ ಪರೀಕ್ಷಾಂಗ ಕುಲಸಚಿವರು ಈ ಬಗ್ಗೆ ಗಮನ ಹರಿಸಬೇಕು. ಡಿಜಿಟಲ್ ಮೌಲ್ಯಮಾಪನದಲ್ಲಿ ಆಗಿರುವ ಗೊಂದಲಗಳನ್ನು ಬಗೆಹರಿಸಬೇಕು. ವ್ಯವಸ್ಥಿತ ಪೂರ್ವ ಸಿದ್ದತೆಯಿಲ್ಲದೇ ಡಿಜಿಟಲ್ ಮೌಲ್ಯ ಮಾಪನ ನಡೆಸಲು ಕಾರಣರಾದವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಗಿದೆ. ಎನ್‌ಎಸ್‌ಯುಐ ಕಾರ್ಯಾಧ್ಯಕ್ಷ ರವಿ ಕಟಿಕೆರೆ, ಉಪಾಧ್ಯಕ್ಷರಾದ ಆದಿತ್ಯ, ಸುಬಾನ್, ಫರಾಜ್ ಇದ್ದರು.

ಇದನ್ನೂ ಓದಿ » ಹಾಸ್ಟೆಲ್ ಟೆರೇಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ
Valuation

