ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 31 MARCH 2024
BHADRAVATHI : ಓಮ್ನಿ ಕಾರು ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ತಮ್ಮಡಿಹಳ್ಳಿ ಬಳಿ ಶುಕ್ರವಾರ ಬೆಳಗಿನ ಜಾವ ಘಟನೆ ಸಂಭವಿಸಿದೆ.
ಅಪಘಾತದ ಪರಿಣಾಮ ವಾಹನ ಮುಂದಕ್ಕೆ ಚಲಾಯಿಸಲು ಸಾಧ್ಯವಾಗದೇ ಓಮ್ನಿ ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಪೊಲೀಸರು ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ. ಮೃತ ವ್ಯಕ್ತಿ ಸುಮಾರು 45 ವರ್ಷದವರೆಂದು ಅಂದಾಜಿಸಲಾಗಿದೆ. ಸಾಧಾರಣ ಮೈಕಟ್ಟು. ಎಣ್ಣೆಗೆಂಪು ಮೈಬಣ್ಣ ಕೋಲುಮುಖ ಹೊಂದಿದ್ದಾರೆ. ವಾರಸುದಾರರು ಪೊಲೀಸ್ ಕಂಟ್ರೋಲ್ ರೂಂ(100), ಭದ್ರಾವತಿ ಗ್ರಾಮಾಂತರ ಪಿಎಸ್‌ಐ (ಮೊ.9480803357) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ದುರ್ಗಿಗುಡಿ ದುರ್ಗಮ್ಮ ಜಾತ್ರೆ ವೇಳೆ ದೇಗುಲದ ಬಾಗಿಲ ಬಳಿ ಬಂದು ನಿಂತಿದ್ದ ಮಹಿಳೆಗೆ ಕಾದಿತ್ತು ಶಾಕ್
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















