ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 DECEMBER 2024
ಭದ್ರಾವತಿ : ಗಣೇಶ್ ರೈಸ್ ಮಿಲ್‌ನಲ್ಲಿ (Rice Mill) ಬಾಯ್ಲರ್ ಸ್ಪೋಟದ ಬಳಿಕ ನಾಪತ್ತೆಯಾಗಿದ್ದ ರಘು ಅವರ ಮೃತದೇಹ ತಡರಾತ್ರಿ ಪತ್ತೆಯಾಗಿದೆ. ಅವಶೇಷಗಳ ಅಡಿಯಲ್ಲಿ ರಘು ಅವರ ಮೃತದೇಹ ಸಿಕ್ಕಿದೆ.
ಇದನ್ನೂ ಓದಿ » ಭದ್ರಾವತಿ ಬಾಯ್ಲರ್ ಸ್ಫೋಟ, ಈವರೆಗಿನ 5 ಪ್ರಮುಖ ಪಾಯಿಂಟ್ ಇಲ್ಲಿದೆ
ಬಾಯ್ಲರ್ ಸ್ಪೋಟಗೊಂಡ ಸ್ಥಳದಲ್ಲಿದ್ದ ರಘು ನಾಪತ್ತೆಯಾಗಿದ್ದರು. ಅವರಿಗಾಗಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯ ನಡೆಸಲಾಗುತ್ತಿತ್ತು. ತಡರಾತ್ರಿ ಮೃತದೇಹ ಪತ್ತೆಯಾಗಿದೆ. ರಘವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ರಘು ಎಂಬುವವರ ಮೃತದೇಹ ಪತ್ತೆಯಾಗಿದೆ. ಸ್ಪೋಟದ ಸ್ಥಳದಲ್ಲಿ ಅವರ ಮೃತದೇಹ ಸಿಕ್ಕಿದೆ.
ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ
ಬಾಯ್ಲರ್ ಸ್ಪೋಟ ಪ್ರಕರಣದಲ್ಲಿ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ. ಅವರೆಲ್ಲರನ್ನು ಭದ್ರಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗದಲ್ಲಿ ಅತಿ ದೊಡ್ಡ ಕಾರು ಎಕ್ಸ್‌ಚೇಂಜ್ ಮೇಳ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422