ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
HOLEHONNURU : ಮನೆಯಲ್ಲಿದ್ದ ಬೀರು ಒಡೆದು ಚಿನ್ನ, ಬೆಳ್ಳಿ ಆಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ. ಭದ್ರಾವತಿ ತಾಲೂಕು ಅರಬಿಳಚಿ ಗ್ರಾಮದ ಮಣಿಮೇಘಲ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮಣಿಮೇಘಲ ಕೆಲಸಕ್ಕೆ ತೆರಳಿದ್ದರು. ಅವರ ತಾಯಿ ಬಟ್ಟೆ ಒಗೆಯಲು ಸಮೀಪದ ಚಾನಲ್ಗೆ ತೆರಳಿದ್ದರು. ಈ ಸಂದರ್ಭ ಮನೆಯ ಬಾಗಿಲು ತೆರೆದು ಒಳ ನುಗ್ಗಿರುವ ಕಳ್ಳರು ಬೀರು ಒಡೆದು 20 ಸಾವಿರ ರೂ. ನಗದು, ಚಿನ್ನದ ತಾಳಿ, ಉಂಗುರ, ಕಿವಿಯೋಲೆ, ಗೆಜ್ಜೆ ಕಳ್ಳತನ ಮಾಡಿದ್ದಾರೆ. ಕಳುವಾದ ಒಟ್ಟು ವಸ್ತುಗಳ ಮೌಲ್ಯ 1 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಮಣಿಮೇಘಲ ಅವರ ತಾಯಿ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾತ್ರಿ ಇಡೀ ಮಳೆ, ಗುಡುಗು, ಮಿಂಚಿನ ಆರ್ಭಟ, ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಮಳೆಯಾಗುತ್ತಿದೆ?