ತಿಂಗಳುಗಟ್ಟಲೆ ಸಂಬಳ ಇಲ್ಲ, ಕುವೆಂಪು ವಿವಿಯಲ್ಲಿ ಹೊರಗುತ್ತಿಗೆ ನೌಕರರ ಮುಷ್ಕರ ಆರಂಭ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 9 FEBRUARY 2024

SHANKARAGHATTA : ಮೂರು ತಿಂಗಳಿಂದ ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ನೌಕರರು ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ನೆವಂಬರ್‌ ತಿಂಗಳಿಂದ ನೌಕರರಿಗೆ ವೇತನ ಬಾಕಿ ಇದೆ.

ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಏಜೆನ್ಸಿ ಮೂಲಕ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗಿದೆ. ಈ ನೌಕರರಿಗೆ ತಡವಾಗಿ ವೇತನ ಪಾವತಿಸಲಾಗುತ್ತಿದೆ. ಈ ಹಿನ್ನೆಲೆ ಕಳೆದ ತಿಂಗಳು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಮುಂದಾಗಿದ್ದರು. ಆಗ ಅಕ್ಟೋಬರ್‌ ತಿಂಗಳ ವೇತನ ಪಾತಿಸಲಾಗಿತ್ತು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ವೇತನ ಇಲ್ಲದೆ ಜೀವನ ನಿರ್ವಹಣೆ ಕಷ್ಟವಾಗಿದೆ. ನವೆಂಬರ್‌, ಡಿಸೆಂಬರ್‌ ಮತ್ತು ಜನವರಿ ತಿಂಗಳ ವೇತನ ಬಾಕಿ ಇದೆ. ಮೂರು ತಿಂಗಳ ಸಂಬಳ ಒಟ್ಟಿಗೆ ನೀಡಬೇಕು. ಅಲ್ಲಿಯವರೆಗೆ ಮುಷ್ಕರ ಮುಂದುವರೆಸುವುದಾಗಿ ಹೊರಗುತ್ತಿಗೆ ನೌಕರರ ಸಂಘದ ಎಚ್ಚರಿಸಿದೆ.

ಇದನ್ನೂ ಓದಿ – ಅಡಿಕೆ ಲೋಡ್‌ ಲಾರಿ ವಶಕ್ಕೆ, ಬೆನ್ನಟ್ಟಿ ಹಿಡಿದ ಕಸ್ಟಮ್ಸ್‌ ಅಧಿಕಾರಿಗಳ ಪಡೆ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment