SHIVAMOGGA LIVE NEWS | 27 FEBRURARY 2023
BHADRAVATHI : ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿ ಹಿನ್ನೆಲೆ ವಿಐಎಸ್ಎಲ್ ಕಾರ್ಮಿಕರು ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಹಾಗಾಗಿ ವಿಐಎಸ್ಎಲ್ ಕಾರ್ಖಾನೆ ಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ವಿಐಎಸ್ಎಲ್ ಕಾರ್ಖಾನೆ ಮುಂದೆ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಡಬೇಕು, ಬಂಡವಾಳ ಹೂಡಿಕೆ ಮಾಡಬೇಕು, ಕಾರ್ಖಾನೆ ಪುನಶ್ಚೇತನ ಮಾಡಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಸರ್ಕಾರ ಪೂರಕವಾಗಿ ಸ್ಪಂದಿಸಿಲ್ಲ.
ಇದನ್ನೂ ಓದಿ – ಭದ್ರಾವತಿಯಲ್ಲಿ ಕಾರ್ಮಿಕರಿಂದ ವಿಐಎಸ್ಎಲ್ ಕಾರ್ಖಾನೆ ಅಪ್ಪಿಕೋ ಚಳವಳಿ
ಪಾದಯಾತ್ರೆಗೆ ನಿರ್ಧಾರ
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಇವತ್ತು ಸೋಗಾನೆಯ ವಿಮಾನ ನಿಲ್ದಾಣದವರೆಗೆ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರು ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ವಿಐಎಸ್ಎಲ್ ಕಾರ್ಖಾನೆ ಮುಂದೆ ಪೊಲೀಸರ ನಿಯೋಜನೆ ಮಾಡಲಾಗಿದೆ. ಕೆ.ಎಸ್.ಆರ್.ಪಿ ಪೊಲೀಸರನ್ನು ಪ್ರತಿಭಟನಾ ಸ್ಥಳದಲ್ಲಿ ನಿಯೋಜಿಸಲಾಗಿದೆ. ಈ ನಡುವೆ ಕಾರ್ಮಿಕರು ಪಾದಯಾತ್ರೆ ಮಾಡಿಯೇ ತೀರುವುದಾಗಿ ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ 50 ವರ್ಷದ ಹಿಂದೆಯೇ ವಿಮಾನ ಬರುತ್ತಿತ್ತು, ಎಲ್ಲಿ ಲ್ಯಾಂಡ್ ಆಗುತ್ತಿದ್ದವು ಗೊತ್ತಾ?
ಕಾರ್ಖಾನೆ ಮುಂಭಾಗ, ಕಾರ್ಮಿಕರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ರಾತ್ರಿಯೇ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣವಿದೆ.