ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 JANUARY 2024
HOLEHONNURU : ಪಟ್ಟಣ ಪಂಚಾಯಿತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 22 ಪೌರ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ಕೈ ಬಿಡಲಾಗಿದೆ. ಈ ಕ್ರಮ ಖಂಡಿಸಿ ಸ್ಥಳೀಯ ಮುಖಂಡರೊಂದಿಗೆ ಪೌರ ಕಾರ್ಮಿಕರು ಮುಖ್ಯಾಧಿಕಾರಿ ಕಚೇರಿಗೆ ತೆರಳಿ ಪ್ರಶ್ನಿಸಿದರು.
ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರ್ನಾಲ್ಕು ವರ್ಷದಿಂದ ಕೆಲಸ ಮಾಡುತ್ತಿರುವ 22 ಪೌರ ಕಾರ್ಮಿಕರಿಗೆ ಇನ್ಮುಂದೆ ಕೆಲಸಕ್ಕೆ ಬಾರದಂತೆ ತಿಳಿಸಲಾಗಿದೆ. ಸೇವೆ ಕಾಯಂ ಆಸೆಯಿಂದ ಕಾಯುತ್ತಿದ್ದ ಕಾರ್ಮಿಕರಿಗೆ ಪಟ್ಟಣ ಪಂಚಾಯಿತಿ ನಿರ್ಧಾರಕ್ಕೆ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಸ್ಥಳೀಯ ಮುಖಂಡ ಆರ್.ಉಮೇಶ್ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕಚೇರಿಗೆ ತೆರಳಿ ಪ್ರಶ್ನಿಸಿದರು.
ಈ ವೇಳೆ ಪೌರ ಕಾರ್ಮಿಕರಿಗೆ ಮುಖ್ಯಾಧಿಕಾರಿ ಬಸವರಾಜ್ ಅವರು, ಪಟ್ಟಣ ಪಂಚಾಯಿತಿಗೆ ಪೌರ ಕಾರ್ಮಿಕರ ನೇರ ನೇಮಕಾತಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಇಲ್ಲಿ ಕೆಲಸ ಮಾಡುತ್ತಿದ್ದವರಿಗೆ ಅನುಭವ ಪತ್ರ ನೀಡಲಾಗುತ್ತದೆ. ಅವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ – SHIMOGA NEWS – ಜಿಲ್ಲೆಯ ಟಾಪ್ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್ ನ್ಯೂಸ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






