ಭದ್ರಾವತಿ: ಜಾನುವಾರು ಮತ್ತು ದ್ವಿಚಕ್ರ ವಾಹನಗಳ ಕಳ್ಳತನ (thief) ಮಾಡುತ್ತಿದ್ದ ಆರೋಪಿಯನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ. ಈತನ ಬಂಧನದಿಂದಾಗಿ 11 ಪ್ರಕರಣಗಳನ್ನು ಭೇದಿಸಿದಂತಾಗಿದೆ.
2025ರ ಸೆಪ್ಟೆಂಬರ್ 24ರಂದು ಹೊಸಸಿದ್ದಾಪುರ ಗ್ರಾಮದ ರಂಜಿತ್ ಎಂಬುವವರ ಕೊಟ್ಟಿಗೆಯಲ್ಲಿದ್ದ ಎರಡು ಹಸು ಹಾಗೂ ಒಂದು ಕರುವನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
ವಿಶೇಷ ತಂಡವು ಭದ್ರಾವತಿಯ ಅಪ್ಪರ್ ಹುತ್ತಾ ನಿವಾಸಿ ದಿಲೀಪ ಅಲಿಯಾಸ್ ಕರಿಯ (20) ಎಂಬಾತನನ್ನು ಬಂಧಿಸಿದೆ. 5 ಜಾನುವಾರು ಕಳ್ಳತನ ಪ್ರಕರಣ, 4 ಬೈಕ್ ಕಳ್ಳತನ ಪ್ರಕರಣ, ಒಂದು ಕೊಲೆ ಯತ್ನ ಮತ್ತು ಹಲ್ಲೆ ಪ್ರಕರಣಗಳು ಸೇರಿದಂತೆ ಒಟ್ಟು 11 ಪ್ರಕರಣಗಳು ಪತ್ತೆಯಾಗಿವೆ. ಆರೋಪಿಯಿಂದ ಅಂದಾಜು ₹95,500 ಮೌಲ್ಯದ 4 ದ್ವಿಚಕ್ರ ವಾಹನಗಳು ಹಾಗೂ ₹20,500 ನಗದು ಸೇರಿ ಒಟ್ಟು ₹1,16,000 ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.
ಡಿವೈಎಸ್ಪಿ ಪ್ರಕಾಶ್ ರಾಥೋಡ್, ಭದ್ರಾವತಿ ನಗರ ಇನ್ಸ್ಪೆಕ್ಟರ್ ಕೆ.ನಾಗಮ್ಮ ಮೇಲ್ವಿಚಾರಣೆಯಲ್ಲಿ, ನ್ಯೂಟೌನ್ ಪಿಎಸ್ಐ ಕವಿತಾ, ಸಿಬ್ಬಂದಿ ನವೀನ್.ಟಿ, ಆದರ್ಶ.ಆರ್, ಪ್ರಕಾಶ.ಜಿ.ಕೆ ಮತ್ತು ಪ್ರಸನ್ನ.ಹೆಚ್ ತಂಡದ ಆರೋಪಿಯನ್ನು ಬಂಧಿಸಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ