‌BREAKING NEWS | ಭದ್ರಾವತಿಯಲ್ಲಿ ಗುಂಡನ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ : ಪ್ರಕರಣವೊಂದರ ಆರೋಪಿಯ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ. ಪೊಲೀಸ್‌ ಸಿಬ್ಬಂದಿಯ ಮೇಲೆ ಆರೋಪಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಸಬ್‌ ಇನ್ಸ್‌ಪೆಕ್ಟರ್‌ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಗುಂಡ ಅಲಿಯಾಸ್‌ ರವಿ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ ಗುಂಡ ಪೊಲೀಸ್‌ ಸಿಬ್ಬಂದಿ ಆದರ್ಶ್‌ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ.

ಈ ವೇಳೆ ಪಿಎಸ್‌ಐ ಕೃಷ್ಣ, ಗುಂಡನಿಗೆ ಶರಣಾಗುವಂತೆ ಸೂಚಿಸಿದರು. ಆಗ ಪಿಎಸ್‌ಐ ಕೃಷ್ಣ ರೌಡಿ ಶೀಟರ್‌ ಗುಂಡನ ಕಾಲಿಗೆ ಗುಂಡು ಹಾರಿಸಿದ್ದಾರೆ. ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ತಿಳಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ಸಿಗಬೇಕಿದೆ.

Parishrama advt 10 feb 2025 1

NATIONAL-PUBLIC-SCHOOL-scaled

ಇದನ್ನೂ ಓದಿ » ಸಕ್ರೆಬೈಲು ಸಮೀಪ ಓರ್ವ ಮಹಿಳೆ, ಇಬ್ಬರು ಪುರುಷರ ಮೃತದೇಹ ಪತ್ತೆ, ಸ್ಥಳಕ್ಕೆ ಪೊಲೀಸ್‌ ದೌಡು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 21, 2025

Leave a Comment