ಭದ್ರಾವತಿ ಅನ್ವರ್ ಕಾಲೋನಿಯಲ್ಲಿ ಮನೆ ಮೇಲೆ ಪೊಲೀಸರ ದಾಳಿ, ಇಬ್ಬರ ವಿರುದ್ಧ ಕೇಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS

ಭದ್ರಾವತಿ | ಖಚಿತ ಮಾಹಿತಿ ಮೇರೆಗೆ ಮನೆ ಒಂದರ ಮೇಲೆ ಪೊಲೀಸರು ದಾಳಿ (POLICE RAID) ನಡೆಸಿ 300 ಕೆ.ಜಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. 8 ಜಾನುವಾರುಗಳ ರಕ್ಷಣೆ ಮಾಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಭದ್ರಾವತಿ ನಗರದ ಅನ್ವರ್ ಕಾಲೋನಿಯ ಮೋಹಿನ್ ಮೊಹಲ್ಲಾದ 1ನೇ ಅಡ್ಡರಸ್ತೆಯ ಮನೆಯೊಂದರ ಮೇಲೆ ದಾಳಿ ನಡೆಸಲಾಗಿದೆ. ಗೋವುಗಳ ವಧೆ ಮಾಡಿ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಭದ್ರಾವತಿ ಹಳೆ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.

300 ಕೆ.ಜಿ ಗೋಮಾಂಸ ವಶಕ್ಕೆ

police jeepಮುನಾವರ್ ಎಂಬಾತನಿಗೆ ಸೇರಿದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮನೆಯ ಎರಡನೆ ಕೊಠಡಿಯಲ್ಲಿ ಗೋ ಮಾಂಸ ಪತ್ತೆಯಾಗಿದೆ. ಇನ್ನು, ಮನೆ ಹಿಂಭಾಗದ ಶೆಡ್’ನಲ್ಲಿ ಮಾಂಸ ಕತ್ತರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಪೊಲೀಸ್ ದಾಳಿ ವೇಳೆ ಇಬ್ಬರು ಮಾಂಸ ಕತ್ತರಿಸುವ ಕೆಲಸದಲ್ಲಿ ನಿರತವಾಗಿದ್ದರು.

ಪೊಲೀಸರನ್ನು ಕಂಡು ಒಬ್ಬಾತ ಪರಾರಿಯಾಗಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಸುಮಾರು 300 ಕೆ.ಜಿಯಷ್ಟು ಗೋಮಾಂಸ ಪತ್ತೆಯಾಗಿದೆ. ಇದನ್ನು ಪರಿಶೀಲನೆ ನಡೆಸಿದ ವೈದ್ಯರು ಎರಡು ಹಸು ಮತ್ತು ಒಂದು ಕರುವಿನ ಮಾಂಸ ಎಂದು ದೃಢಿಕರಿಸಿದ್ದಾರೆ.

ಗೋವುಗಳ ರಕ್ಷಣೆ

ಶೆಡ್’ನಲ್ಲಿ ಪರಿಶೀಲನೆ ನಡೆಸಿದಾಗ ಐದು ಗೋವುಗಳು, ಎರಡು ಕರು ಮತ್ತು ಒಂದು ಕೋಣ ಪತ್ತೆಯಾಗಿದೆ. ಅವುಗಳನ್ನು ಪೊಲೀಸರು (POLICE RAID) ರಕ್ಷಣೆ ಮಾಡಿದ್ದಾರೆ. ಇನ್ನು, ಗೋವುಗಳನ್ನು ಕತ್ತರಿಸಲು ಬಳಸಿದ್ದ ಮಚ್ಚುಗಳು ಸೇರಿದಂತೆ ಹಲವು ವಸ್ತುಗಳು, ಒಂದು ಬೈಕನ್ನು ವಶಕ್ಕೆ ಪಡೆಯಲಾಗಿದೆ.

ಮುನಾವರ್ ಮತ್ತು ಮುಸ್ತಫಾ ಎಂಬುವವರ ವಿರುದ್ಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಎಸ್ಐ ಈರೇಶ್ ನೇತೃತ್ವದಲ್ಲಿ, ಸಿಬ್ಬಂದಿ ಹಾಲಪ್ಪ, ಧರ್ಮನಾಯ್ಕ, ಸಂತೋಷ್ ಕೆ, ವೀರನಗೌಡ, ರಾಜು, ಮೌನೇಶ್ ಶೀಕಲ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ – ವಾಕಿಂಗ್ ಶೂ ಒಳಗೆ ಬುಸುಗುಡುತ್ತಿತ್ತು ನಾಗರ ಹಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment