ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 30 ಡಿಸೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ಮೇಲೆ ಭದ್ರಾವತಿ ನ್ಯೂಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. 26 ಮಂದಿಯನ್ನು ಬಂಧಿಸಿ, ನಗದು, ಇಸ್ಪೀಟ್ ಕಾರ್ಡುಗಳನ್ನು ವಶಕ್ಕೆ ಪಡೆದಿದ್ದಾರೆ.
ಭದ್ರಾವತಿಯ ನ್ಯೂ ಕಾಲೋನಿಯಲ್ಲಿರುವ VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್’ನಲ್ಲಿ, ಅಂದರ್ ಬಾಹರ್ ಆಟವಾಡಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಕ್ಲಬ್’ನಲ್ಲಿ 26 ಮಂದಿ ವಿವಿಧ ಟೇಬಲ್’ಗಳಲ್ಲಿ ಕುಳಿತು ಅಂದರ್ ಬಾಹರ್ ಆಟವಾಡುತ್ತಿದ್ದರು. ದಾಳಿ ನಡೆಸಿದ ಪೊಲೀಸರು, ಆಟದಲ್ಲಿ ತೊಡಗಿದ್ದವರನ್ನು ಬಂಧಿಸಿದ್ದಾರೆ. ಇವರಿಂದ 11,110 ರೂ. ನಗದು, ಇಸ್ಪೀಟ್ ಕಾರ್ಡ್’ಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರ ಪೈಕಿ ಭದ್ರಾವತಿಯ ವಿವಿಧ ಬಡಾವಣೆಗೆ ಸೇರಿದ ನಿವೃತ್ತ ನೌಕರರು, ಖಾಸಗಿ ಕಂಪನಿಯಗಳ ಉದ್ಯೋಗಿಗಳು, ಚಾಲಕರು ಇದ್ದಾರೆ.
ಎಎಸ್’ಪಿ ಜಿತೇಂದ್ರ ಕುಮಾರ್ ದಯಂ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪ್ರೊಬೆಷನರಿ ಡಿವೈಎಸ್’ಪಿ ಗಜಾನನ ಸತಾರ್, ನ್ಯೂಟೌನ್ ಠಾಣೆ ಪಿಎಸ್ಐ, ಸಿಬ್ಬಂದಿ ಪಾಲ್ಗೊಂಡಿದ್ದರು.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






