ಹೊಳೆಹೊನ್ನೂರು ವ್ಯಾಪ್ತಿ, ಇಂದಿನಿಂದ ಮೂರು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಹೊಳೆಹೊನ್ನೂರು ಮೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ವ್ಯಾಪ್ತಿಯ ಘಟಕ-4 ಆನವೇರಿ ಶಾಖೆಗೆ ಸಂಬಂಧಿಸಿದ 66/11 ಕೆ.ವಿ ಮಲ್ಲಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದೆ.

ಜುಲೈ 23 ರಿಂದ 25 ರವರೆಗೆ ಮಲ್ಲಾಪುರ ವಿತರಣಾ ಕೇಂದ್ರದ 11 ಕೆ.ವಿ ಮಾರ್ಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಮೆಸ್ಕಾಂ ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.

power cut mescom ELECTRICITY