BREAKING NEWS – ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ, ವಿಡಿಯೋ ವೈರಲ್‌

ಭದ್ರಾವತಿ: ಮೆರವಣಿಗೆ ಸಂದರ್ಭ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ (slogan) ಕೂಗಿರುವ ವಿಡಿಯೋ ವೈರಲ್‌ ಆಗಿದೆ. ಭದ್ರಾವತಿಯಲ್ಲಿ ಘೋಷಣೆ ಕೂಗಲಾಗಿದೆ ಎಂದು ಆರೋಪ ಕೇಳಿ ಬಂದಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ವೈರಲ್‌ ವಿಡಿಯೋದಲ್ಲಿ ಏನಿದೆ?

ದೊಡ್ಡ ಸಂಖ್ಯೆಯಲ್ಲಿ ಸೇರಿರುವ ಯುವಕರ ಗುಂಪು ಮೊಬೈಲ್‌ ಟಾರ್ಚ್‌ಗಳನ್ನು ಹಿಡಿದು ನಿಂತಿದ್ದಾರೆ. ಮಧ್ಯದಲ್ಲಿದ್ದ ಯುವಕರ ಪೈಕಿ ಕೆಲವರು ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.

ದಾಖಲಾಗಲಿದೆ ಎಫ್‌ಐಆರ್‌

ಇನ್ನು, ವಿಡಿಯೋ ವೈರಲ್‌ ಬೆನ್ನಿಗೆ ಪೊಲೀಸ್‌ ಇಲಾಖೆ ಎಫ್‌ಐಆರ್‌ ದಾಖಲಿಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ರವಾನಿಸಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಭದ್ರಾವತಿಯಲ್ಲಿ ನಿನ್ನೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿದೆ. ಈ ಸಂಬಂಧ ಭದ್ರಾವತಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗುತ್ತಿದೆ. ಘೋಷಣೆ ಕೂಗಿದವರು ಯಾರು, ವಿಡಿಯೋದ ಅಸಲಿಯತ್ತನ್ನು ಪರಿಶೀಲಿಸಾಗುತ್ತಿದೆ. ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.  

Nanjappa Hospital Advertisement

Prashanth-Loan-Advertisement.

ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂನಲ್ಲಿ ಬಾಲಕ, ಬಾಲಕಿ ರಕ್ಷಣೆ, ಏನಿದು ಕೇಸ್‌?

pro pakistan slogan in bhadravathi

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment