ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಭದ್ರಾ ಜಲಾಶಯದ ಬಲದಂಡೆ ನಾಲೆ ಒಡೆದು ಜಲಜೀವನ್ ಕಾಮಗಾರಿ ನಡೆಸುತ್ತಿರುವುದನ್ನು ಖಂಡಿಸಿ ರೈತರು ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇನ್ನೊಂದೆಡೆ ಭದ್ರಾ ಜಲಾಶಯದ ಬಲದಂಡೆ ಕಾಮಗಾರಿ ನಡೆಯುತ್ತಿರುವ ಸ್ಥಳದಿಂದ 1 ಕಿಲೋ ಮೀಟರ್‌ವರೆಗೆ ನಿಷೇಧಾಜ್ಞೆ (Prohibition) ಜಾರಿಗೊಳಿಸಲಾಗಿದೆ.
ಜೂನ್ 23ರ ಬೆಳಗ್ಗೆ 8 ಗಂಟೆಯಿಂದ ಜೂನ್ 25ರ ರಾತ್ರಿ 8 ಗಂಟೆವರೆಗೆ ಬಲದಂಡೆ ಕಾಮಗಾರಿ ಸ್ಥಳದ ಸುತ್ತಲು ನಿಷೇಧಾಜ್ಞೆ ವಿಧಿಸಿ ತರೀಕೆರೆ ತಹಶೀಲ್ದಾರ್ ಆದೇಶಿಸಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್
ಇನ್ನೊಂದೆಡೆ ರೈತರು ಕಾಮಗಾರಿ ಸ್ಥಳಕ್ಕೆ ತೆರಳದಂತೆ ಮತ್ತು ಭದ್ರಾ ಜಲಾಶಯಕ್ಕೆ ಪ್ರವೇಶಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಶಂಕರಘಟ್ಟ ಲಕ್ಕವಳ್ಳಿ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.

ಜಲಾಶಯದ ಮುಂಭಾಗ ಇರುವ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ.

ಇದನ್ನೂ ಓದಿ » ‘ಆಗ ಬೀದಿ ರಂಪಾಟ ಮಾಡಿದ್ದ ಬಿಜೆಪಿ ನಾಯಕರ ಬಾಯಿ ಈಗ ಒಣಗಿ ಹೋಗಿದೆಯೇ?ʼ, ಬೇಳೂರು ಗರಂ

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು







