ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | BHADRAVATHI | 19 ಏಪ್ರಿಲ್ 2022
ಭದ್ರಾವತಿ ನಗರದ ಕೆಳಸೇತುವೆಯಿಂದ ಉಂಬ್ಳೆಬೈಲು ರಸ್ತೆ ಕೃಷ್ಣಪ್ಪ ವೃತ್ತದವರೆಗಿನ ರಸ್ತೆಗೆ ಹಂಪ್ ಅಳವಡಿಸುವಂತೆ ಆಗ್ರಹಿಸಿ ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್.ಗೌಡ ಪ್ರತಿಭಟನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಾಲೂಕು ಕಚೇರಿ ಮುಂಭಾಗ ಶಕಶಿಕುಮಾರ್ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಅಂಡರ್‌ಬ್ರಿಡ್ಜ್ನಿಂದ ಉಂಬ್ಳೆಬೈಲು ರಸ್ತೆ ಕೃಷ್ಣಪ್ಪ ಸರ್ಕಲ್‌ವರೆಗೂ ರಸ್ತೆ ಅಗಲೀಕರಣ ಮಾಡಲಾಗಿದೆ. ಹೊಸದಾಗಿ ರಸ್ತೆಯನ್ನು ನಿರ್ಮಿಸಲಾಗಿದೆ. ಕಡದಕಟ್ಟೆ ಬಳಿ ರೈಲ್ವೆ ಮೇಲ್ವೇತುವೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಬದಲಿ ಮಾರ್ಗವಾಗಿರುವ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಇದರಿಂದ ಪಾದಚಾರಿಗಳು ರಸ್ತೆ ದಾಟಲು ಪರದಾಡುವಂತಾಗಿದೆ. ಹೀಗಾಗಿ ರಸ್ತೆಗೆ ಹಂಪ್‌ಗಳನ್ನು ಅಳವಡಿಸಬೇಕು. ಈ ಮೂಲಕ ಅಪಘಾತ ತಡೆ ಹಾಗೂ ಪಾದಚಾರಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಜನ್ನಾಪುರ ಭಾಗದಲ್ಲಿನ ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಹೀಗಾಗಿ ಅಂಗಡಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೆ ಮದ್ಯದಂಗಡಿಗಳನ್ನು ತೆರವು ಮಾಡಬೇಕು. 32ನೇ ವಾರ್ಡಿನ ಫಿಲ್ಟರ್‌ಶೆಡ್ ವ್ಯಾಪ್ತಿಯಲ್ಲಿಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ಕೆ.ವಿ.ಧನಂಜಯ, ಸುರೇಂದ್ರಪ್ಪ, ಅರುಣ್‌ಕುಮಾರ್ ಇದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ